ಹೊಸ ವರ್ಷಾಚರಣೆ.. ಶೃಂಗೇರಿ ಶಾರದಾಂಬೆ ದರ್ಶನಕ್ಕೆ ಬಂದ ಸಾವಿರಾರು ಭಕ್ತರು - new year celebration
ಚಿಕ್ಕಮಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಜಿಲ್ಲೆಯಲ್ಲಿರುವ ಪ್ರಮುಖ ಧಾರ್ಮಿಕ ಕ್ಷೇತ್ರಕ್ಕೆ ಪ್ರವಾಸಿಗರ ದಂಡು ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಕಳೆದ ಮೂರು ದಿನಗಳಿಂದ ಕಾಫಿನಾಡಿಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಪ್ರವಾಸಿ ತಾಣಗಳನ್ನು ವೀಕ್ಷಿಸಿದ್ದಾರೆ. ಹೋಂಸ್ಟೇ, ರೆಸಾರ್ಟ್ ನಲ್ಲಿ ಹೊಸ ವರ್ಷಾಚರಣೆ ಮಾಡಿ, ಇಂದು ಧಾರ್ಮಿಕ ಕ್ಷೇತ್ರ ಶೃಂಗೇರಿ, ಹೊರನಾಡು, ಕಳಸಕ್ಕೆ ಭೇಟಿ ನೀಡುತ್ತಿದ್ದಾರೆ.
Last Updated : Feb 3, 2023, 8:38 PM IST