ಹುಬ್ಬಳ್ಳಿ: ಕಾರು-ಟ್ಯಾಂಕರ್ ಅಪಘಾತ; ಮೂವರು ಸಾವು, ಮೂವರಿಗೆ ಗಾಯ - ಈಟಿವಿ ಭಾರತ ಕನ್ನಡ
ಹುಬ್ಬಳ್ಳಿ:ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಬಳಿ ನಡೆದಿದೆ. ಹುಬ್ಬಳ್ಳಿ ನಿವಾಸಿಗಳಾದ ಮೊಹಮ್ಮದ್ ಇಶಾನ್, ಮೊಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಮೃತರು. ಉಮರ್ ಕರ್ನೂಲಕರ್, ಪೈಯಾಜ್ ಖಾಲಿಮದರ, ಅಬ್ರಾಜ್ ಪದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಇಸ್ಮಾಯಿಲ್ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಟ್ರಕ್ಗೆ ಗುದ್ದಿದ ಕಾರು: ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಸ್ಥಳದಲ್ಲೇ ಸಾವು