ಕರ್ನಾಟಕ

karnataka

ಹುಲಿ ಮೃತದೇಹಪತ್ತೆ

ETV Bharat / videos

ಕೆರೆಯಲ್ಲಿ ಹುಲಿ ಕಳೇಬರ ಪತ್ತೆ: ಮೊದಲೇ ಸೆರೆ ಹಿಡಿಯದಿದ್ದಕ್ಕೆ ಜನರ ಆಕ್ರೋಶ - ETV Bharat kannada News

By

Published : Feb 8, 2023, 10:05 AM IST

Updated : Feb 14, 2023, 11:34 AM IST

ಚಾಮರಾಜನಗರ :ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿಯೊಂದರ ಕಳೇಬರ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಚೌಡಹಳ್ಳಿ ಗ್ರಾಮದ ಮಲ್ಲಯ್ಯನಕಟ್ಟೆ ಕೆರೆಯಲ್ಲಿ ನಡೆದಿದೆ. ಹುಲಿಯು ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಹುಲಿ ಸಾವಿಗೆ ಇನ್ನೂ ಕೂಡ ನಿಖರ ಕಾರಣ ತಿಳಿದು ಬಂದಿಲ್ಲ. ಕೆರೆಯಲ್ಲಿ ದನಗಳಿಗೆ ನೀರು ಕುಡಿಸಲು ರೈತರೊಬ್ಬರು ಹೋಗಿದ್ದಾಗ ಕಳೇಬರ ಕೆರೆಯಲ್ಲಿ ತೇಲುತ್ತಿರುವುದು ಕಂಡು ಬಂದ ಬಳಿಕ ವಿಚಾರ ಗೊತ್ತಾಗಿದೆ. ಜಾನುವಾರುಗಳ‌ ಮೇಲೆ ದಾಳಿ ಬಗ್ಗೆ ಮಾಹಿತಿ ಕೊಟ್ಟರೂ ಅರಣ್ಯ ಇಲಾಖೆ ಸಿಬ್ಬಂದಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.     

ಇದನ್ನೂ ಓದಿ :ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಕೇಸ್​: ತಂದೆಯನ್ನು ಭೇಟಿಯಾಗಲು ಹೊರಟಿದ್ದವ ಅಪಘಾತಕ್ಕೆ ಬಲಿ

Last Updated : Feb 14, 2023, 11:34 AM IST

ABOUT THE AUTHOR

...view details