ಚಾಮರಾಜನಗರ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಹರಿದು ಬಂದ ಪ್ರವಾಸಿಗರ ದಂಡು - ವಿಡಿಯೋ - ಪ್ರವಾಸಿ ತಾಣಗಳಿಗೆ ಹರಿದು ಬಂದ ಪ್ರವಾಸಿಗರ ದಂಡು
ಚಾಮರಾಜನಗರ: ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಹಾಗೂ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರ ದಂಡೇ ಆಗಮಿಸಿತ್ತು. ಅಭಯಾರಣ್ಯ ವ್ಯಾಪ್ತಿಯಲ್ಲಿರುವ ಈ ಎರಡು ಪರ್ವತ ಶ್ರೇಣಿಗಳು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತವೆ. ಭಾನುವಾರ ಇಲ್ಲಿಗೆ ಭೇಟಿ ನೀಡಿದ್ದ ಸಾವಿರಾರು ಪ್ರವಾಸಿಗರು ಹಿಮವದ್ ಗೋಪಾಲಸ್ವಾಮಿಯ ದರ್ಶನ ಪಡೆದರು.
ಜೊತೆಗೆ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಕರ್ನಾಟಕದ ಪ್ರಸಿದ್ಧ ಗಿರಿಧಾಮವಾಗಿದ್ದು, ಹಿಮದ ವಾತಾವರಣ, ವಿಶಾಲ ಹುಲ್ಲುಗಾವಲು, ಶೋಲಾ ಅರಣ್ಯ ಪ್ರವಾಸಿಗರ ಕಣ್ಮನ ಸೆಳೆಯುತ್ತದೆ. ಚಲಿಸುವ ಮೋಡಗಳು, ಜೋರಾಗಿ ಬೀಸುವ ತಂಪು ಗಾಳಿ, ಸುತ್ತಲೂ ಹಿಮ ಆವರಿಸಿರುವುದು ಪ್ರವಾಸಿಗರಿಗೆ ಸ್ವರ್ಗದ ಅನುಭವ ನೀಡುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಯೋಜನೆ ಇರುವುದರಿಂದ ಪ್ರವಾಸಿಗರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಜೊತೆಗೆ ಸುಂದರ ಪ್ರವಾಸಿ ತಾಣವಾಗಿರುವ ಬಿಳಿಗಿರಿರಂಗನ ಬೆಟ್ಟಕ್ಕೂ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.