ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ ಗೋಕಾಕ್ ಫಾಲ್ಸ್; ಫೋಟೋ ಕ್ಲಿಕ್ಕಿಸಲು ಪ್ರವಾಸಿಗರ ದುಸ್ಸಾಹಸ - belagavi news
ಬೆಳಗಾವಿ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಬೆಳಗಾವಿಯ ಗೋಕಾಕ್ ಫಾಲ್ಸ್ ಮೈದುಂಬಿ ಹರಿಯುತ್ತಿದೆ. 180 ಅಡಿ ಎತ್ತರದಿಂದ ಧುಮ್ಮಿಕ್ಕುತ್ತಿರುವ ರಮಣೀಯ ದೃಶ್ಯವೈಭವ ನೋಡಲು ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಆದರೆ ಅಪಾಯವನ್ನು ಲೆಕ್ಕಿಸದೆ ಹಲವು ಪ್ರವಾಸಿಗರು ಜಲಪಾತದ ಹತ್ತಿರ, ತುತ್ತತುದಿಗೆ ತೆರಳಿ ಫೋಟೋ, ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬೀಳುತ್ತಿದ್ದಾರೆ. ಅನಾಹುತಗಳು ಸಂಭವಿಸುವ ಮೊದಲೇ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳಬೇಕಿದೆ.
Last Updated : Feb 3, 2023, 8:24 PM IST