ಕರ್ನಾಟಕ

karnataka

ಮೈಸೂರು- ಬೆಂಗಳೂರು ಎಕ್ಸ್​ಪ್ರೆಸ್ ಹೈವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ನಿರ್ಬಂಧ: ನಿಯಮ ಉಲ್ಲಂಘಿಸಿದವರಿಗೆ ಬಿತ್ತು ದಂಡ..

ETV Bharat / videos

ಮೈಸೂರು- ಬೆಂಗಳೂರು ಎಕ್ಸ್​ಪ್ರೆಸ್ ಹೈವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ನಿರ್ಬಂಧ.. ನಿಯಮ ಉಲ್ಲಂಘಿಸಿದವರಿಗೆ ಬಿತ್ತು ದಂಡ

By

Published : Aug 1, 2023, 6:36 PM IST

ರಾಮನಗರ:ಮೈಸೂರು- ಬೆಂಗಳೂರು ಎಕ್ಸ್​ಪ್ರೆಸ್​ ಹೈವೇಯಲ್ಲಿ ಇಂದಿನಿಂದ ಅಧಿಕೃತವಾಗಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ನಿರ್ಬಂಧ ಮಾಡಲಾಗಿದೆ. ಈ ಹಿನ್ನೆಲೆ ರಾಮನಗರದ ಸಂಘಬಸವನ ದೊಡ್ಡಿ ಎಕ್ಸಿಟ್ ಗೇಟ್ ಪೊಲೀಸರು ತಪಾಸಣೆ ನಡೆಸಿ ನಿಯಮ ಉಲ್ಲಂಘಿಸಿದ ಹಲವು ಬೈಕ್ ಸವಾರರಿಗೆ 500 ರೂ ದಂಡ ವಿಧಿಸಿದ್ದಾರೆ. ಹೆದ್ದಾರಿಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರ ನಿಷೇಧಿಸಿರುವ ಹಿನ್ನೆಲೆಯಲ್ಲಿ, ವಾಹನ ಸವಾರರು ಸರ್ವೀಸ್ ರಸ್ತೆಯಲ್ಲಿ ಪ್ರಯಾಣ ಮಾಡಬೇಕು ಎಂದು ಈ ವೇಳೆ ಸಂಚಾರಿ ಪೊಲೀಸರು ವಾಹನ ಸವಾರರಿಗೆ ತಿಳಿ ಹೇಳಿದರು.

ಹೆದ್ದಾರಿ ಅಪಘಾತದಲ್ಲಿ ಸಾವನ್ನಪ್ಪಿದ ಬಹುತೇಕ ಮಂದಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ಸವಾರರಾಗಿದ್ದು, ಹೀಗಾಗಿ ಮೈಸೂರು - ಬೆಂಗಳೂರು ಎಕ್ಸ್​​​ಪ್ರೆಸ್ ಹೆದ್ದಾರಿಯಲ್ಲಿ ಆಗಸ್ಟ್ 1ರಿಂದ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ನಿರ್ಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿತ್ತು. ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ನಿರ್ಬಂಧ ಕುರಿತು ಮಾತನಾಡಿದ್ದ ಸಂಚಾರಿ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಕಡಿಮೆ ಸಿಸಿಯ ವಾಹನಗಳು ಹೆದ್ದಾರಿಯಲ್ಲಿ ವೇಗದಲ್ಲಿ ಹೋದರೆ ನಿಯಂತ್ರಣ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಈ ನಿರ್ಬಂಧ ಸರಿಯಿದೆ ಎಂದು ಹೇಳಿದ್ದರು.

ಇದನ್ನೂ ಓದಿ:ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಮತ್ತೆ ಅಪಘಾತ: ಬಸ್​ ಕಂಡಕ್ಟರ್​ ಸಾವು

ABOUT THE AUTHOR

...view details