ಕರ್ನಾಟಕ

karnataka

ಚಾಲಕರ ಮಕ್ಕಳಿಗೆ ವಿದ್ಯಾನಿಧಿ

ETV Bharat / videos

ಸಾರಿಗೆ ಇಲಾಖೆಯ ಟ್ಯಾಕ್ಸಿ, ಆಟೋ, ಕ್ಯಾಬ್‌ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ

By

Published : Mar 15, 2023, 8:19 AM IST

ಹುಬ್ಬಳ್ಳಿ :ಸಾರಿಗೆ ಇಲಾಖೆಯ ಟ್ಯಾಕ್ಸಿ, ಆಟೋ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರ ಮಕ್ಕಳಿಗೆ ಸರ್ಕಾರ ವಿದ್ಯಾನಿಧಿ ಯೋಜನೆ ಜಾರಿಗೆ ತರುತ್ತಿದೆ. ಚಾಲಕರ ಮಕ್ಕಳು ಆರ್ಥಿಕ ತೊಂದರೆಯಿಂದ ಓದು ಅರ್ಧಕ್ಕೆ ನಿಲ್ಲಿಸುತ್ತಾರೆ. ಇದನ್ನು ನಿವಾರಿಸಲು ಸಾರಿಗೆ ಇಲಾಖೆಯು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೇತೃತ್ವದಲ್ಲಿ ಅರ್ಹ ಪಲಾನುಭವಿಗಳನ್ನು ಗುರುತಿಸುತ್ತಿದೆ. ಈ ಮೂಲಕ ಚಾಲಕರ ಮಕ್ಕಳಿಗೆ ಮೆಟ್ರಿಕ್ ನಂತರದ ಶಿಕ್ಷಣಕ್ಕೆ ವಿದ್ಯಾನಿಧಿ ವಿದ್ಯಾರ್ಥಿವೇತನ ನೀಡುತ್ತಿದೆ.

ಟೆಕ್ನಿಕಲ್, ನಾನ್ ಟೆಕ್ನಿಕಲ್ ಸೇರಿದಂತೆ ಎಲ್ಲ ರೀತಿಯ ಸ್ನಾತಕ, ಸ್ನಾತಕೋತ್ತರ ಪದವಿಗೆ ಸೂಕ್ತ ರೀತಿಯಲ್ಲಿ ವಿದ್ಯಾರ್ಥಿ ವೇತನ ನೀಡಲು ಇಲಾಖೆ ಮುಂದಾಗಿದೆ. ಪಿಯುಸಿ, ಐಟಿಐ, ಡಿಪ್ಲೊಮಾ ವ್ಯಾಸಂಗಕ್ಕೆ ವಿದ್ಯಾರ್ಥಿಗಳಿಗೆ 2,500 ರೂಪಾಯಿ, ವಿದ್ಯಾರ್ಥಿನಿಯರಿಗೆ 3,000 ರೂ.ನೀಡಲಾಗುತ್ತದೆ. ಬಿಎ, ಬಿಎಸ್ಸಿ, ಬಿಕಾಂ, ಬಿಟೆಕ್, ಬಿಬಿಎ ಸೇರಿದಂತೆ ಪದವಿ ವಿದ್ಯಾರ್ಥಿಗಳಿಗೆ 5,000 ರೂ. ಮತ್ತು 5,500 ರೂ ಹಾಗೂ ಸ್ನಾತಕೋತ್ತರ ಪದವಿ ಓದುತ್ತಿರುವವರಿಗೆ 10,000 ಮತ್ತು 11,000 ರೂ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.   

ಧಾರವಾಡ ಜಿಲ್ಲೆಯಲ್ಲಿ ನಿರೀಕ್ಷೆಯ ಮಟ್ಟದಲ್ಲಿ ಅರ್ಜಿಗಳು ಸಲ್ಲಿಕೆಯಾಗಿಲ್ಲ. ಹೀಗಾಗಿ ಇಲಾಖೆ ಪೋಷಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಅರ್ಜಿ ಸಲ್ಲಿಸುವ ಮೂಲಕ ಯೋಜನೆಯ ಸದುಪಯೋಗ ಮಾಡಿಕೊಳ್ಳಲು ಇಲಾಖೆ ಮನವಿ ಮಾಡಿದೆ.    

ಇದನ್ನೂ ಓದಿ:ಗ್ರಾಚ್ಯುಟಿ ಹಣಕ್ಕಾಗಿ ಪ್ರಧಾನಿಗೆ ಪತ್ರ ಬರೆದ ನಿವೃತ್ತ ಸಾರಿಗೆ ನೌಕರ

ABOUT THE AUTHOR

...view details