ಎರಡು ಗುಂಪುಗಳ ಮಧ್ಯೆ ಮಾರಾಮಾರಿ.. ಮಹಿಳೆಯರಿಬ್ಬರಿಗೆ ಗಾಯ, ವಿಡಿಯೋ ವೈರಲ್ - ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಹುದ್ದೆ
ಉತ್ತರಪ್ರದೇಶದ ನೋಯ್ಡಾದ ಹೈಡ್ ಪಾರ್ಕ್ ಸೊಸೈಟಿಯ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಹುದ್ದೆಗೆ ವಿವಿಧ ಅಭ್ಯರ್ಥಿಗಳನ್ನು ಬೆಂಬಲಿಸುವ ಎರಡು ಗುಂಪುಗಳ ಜನರ ಮಧ್ಯೆ ಹೊಡೆದಾಟ ನಡೆದಿದೆ. ಈ ವೇಳೆ ಇಬ್ಬರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ದೂರು ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಡಿಸಿಪಿ ಹೇಳಿದ್ದಾರೆ.
Last Updated : Feb 3, 2023, 8:29 PM IST