ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಗರ್ಭಿಣಿ ಸೇರಿ ಇಬ್ಬರು ಸಾವು - car caught fire in Kannur
ಕಣ್ಣೂರು(ಕೇರಳ): ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಗರ್ಭಿಣಿ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ. ಕಣ್ಣೂರು ಜಿಲ್ಲಾಸ್ಪತ್ರೆಗೆ ಆಗಮಿಸುತ್ತಿದ್ದಾಗ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಘಟನೆ ನಡೆದಿದೆ. ಮೃತರನ್ನು ಜಿಲ್ಲೆಯ ಕುಟ್ಟಿಯತೂರಿನ ಪ್ರಜಿತ್ (34) ಮತ್ತು ಅವರ ಪತ್ನಿ ರಿಷಾ (26) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇತರ ನಾಲ್ವರನ್ನು ಸಾರ್ವಜನಿಕರು ರಕ್ಷಿಸಿದ್ದಾರೆ. ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮೃತರು ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ :ಎಲೆಕ್ಟ್ರಾನಿಕ್ಸ್ ಅಂಗಡಿ, ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆಯ ಮೇಲ್ಮಹಡಿಯಲ್ಲಿ ಅಗ್ನಿ ಅವಘಡ