ಕರ್ನಾಟಕ

karnataka

ದೆಹಲಿ- ಜೈಪುರ್​ ಎಕ್ಸ್​ಪ್ರೆಸ್​ ಹೈವೇಯಲ್ಲಿ ಹೊತ್ತಿ ಉರಿದ ಬಸ್​: ಇಬ್ಬರು ಸಾವು

ETV Bharat / videos

ದೆಹಲಿ - ಜೈಪುರ್​ ಎಕ್ಸ್​ಪ್ರೆಸ್​ ಹೈವೇಯಲ್ಲಿ ಹೊತ್ತಿ ಉರಿದ ಬಸ್​: ಇಬ್ಬರು ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ - ಬಸ್​ನಲ್ಲಿ ಏಕಾಏಕಿ ಬೆಂಕಿ

By ETV Bharat Karnataka Team

Published : Nov 9, 2023, 8:18 AM IST

Updated : Nov 9, 2023, 3:43 PM IST

ಗುರುಗ್ರಾಮ(ಹರಿಯಾಣ): ಇಲ್ಲಿನ ದೆಹಲಿ ಮತ್ತು ಜೈಪುರ್​ ಎಕ್ಸ್​ಪ್ರೆಸ್​ ಹೈವೇಯಲ್ಲಿ ಬಸ್​ ಹೊತ್ತಿ ಉರಿದು ಇಬ್ಬರು ಮೃತಪಟ್ಟಿದ್ದಾರೆ. ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಇಬ್ಬರು ಪ್ರಯಾಣಿಕರು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದಾರೆ. 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದರು.

ಪೊಲೀಸರ ಪ್ರಕಾರ, ಗಾಯಗೊಂಡ ಐವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿಯಿಂದ ಜೈಪುರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿರುವ ಝಾರ್ಸಾ ಮೇಲ್ಸೇತುವೆ ಬಳಿ ರಾತ್ರಿ 8.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆದ್ದಾರಿ ಮಧ್ಯೆ ಬಸ್​ ಹೊತ್ತಿ ಉರಿಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಘಟನೆಯಿಂದಾಗಿ ದೆಹಲಿ ಮತ್ತು ಜೈಪುರ್​ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯವಾಗಿತ್ತು. ಸದ್ಯ ಮೃತರ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ನಿರತರಾಗಿದ್ದಾರೆ. 

ಇದನ್ನೂ ಓದಿ:ಆಸ್ಪತ್ರೆಯಲ್ಲಿ ಸಿಗದ ಆಂಬ್ಯುಲೆನ್ಸ್.. ಸಹೋದರಿಯ ಶವ ಬೈಕ್​ನಲ್ಲಿ ಸಾಗಿಸಿದ ಯುವಕ

Last Updated : Nov 9, 2023, 3:43 PM IST

ABOUT THE AUTHOR

...view details