ಮುಖಾಮುಖಿ ಡಿಕ್ಕಿ ಹೊಡೆದ ಎರಡು ಟ್ರಕ್‌ಗಳು.. ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ! - ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ
ಹಿಮಾಚಲ ಪ್ರದೇಶದ ಕುಲ್ಲುವಿನಲ್ಲಿ ಎರಡು ಟ್ರಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಇದರಲ್ಲಿ ಎರಡೂ ಲಾರಿಗಳ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡೂ ಟ್ರಕ್‌ಗಳು ರಸ್ತೆಗೆ ಉರುಳಿವೆ. ಗುರುವಾರ ರಾತ್ರಿ ಕುಲ್ಲು- ಮನಾಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಟ್ರಕ್‌ಗಳ ಡಿಕ್ಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ಸಹಾಯದಿಂದ ಗಾಯಗೊಂಡ ಟ್ರಕ್ ಚಾಲಕರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಲಾರಿಯಲ್ಲಿ ತುಂಬಿದ್ದ ಸೇಬಿನ ಕ್ರೇಟ್ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದಾವೆ. ಈ ಘಟನೆ ಕುರಿತು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Last Updated : Feb 3, 2023, 8:27 PM IST