ಕೋಲಾರದಲ್ಲಿ ಬಸ್ ಸೀಟಿಗಾಗಿ ಮಹಿಳೆಯರಿಬ್ಬರ ಕಿತ್ತಾಟ, ಪೊಲೀಸರಿಂದ ಲಾಠಿ ಚಾರ್ಜ್ - ವಿಡಿಯೋ - etv bharat kannada
ಕೋಲಾರ: ಶಕ್ತಿ ಯೋಜನೆಯಡಿ ನಿತ್ಯ ಲಕ್ಷಾಂತರ ಮಹಿಳೆಯರು ರಾಜ್ಯಾದ್ಯಂತ ಪ್ರಯಾಣ ಮಾಡುತ್ತಿದ್ದಾರೆ. ಇತ್ತೀಚಿಗೆ ಮಹಿಳೆರು ಬಸ್‌ನಲ್ಲಿ ಸೀಟಿಗಾಗಿ ಜಗಳವಾಡಿಕೊಂಡಿರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಆದರೆ, ಈಗ ಸೀಟಿಗಾಗಿ ಮಹಿಳೆಯರು ಕಿತ್ತಾಡಿಕೊಂಡಿರುವ ಘಟನೆ ಕೋಲಾರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಸೀಟು ಹಿಡಿಯಲು ಮಹಿಳೆಯೊಬ್ಬರು ಕಿಟಕಿಯಿಂದ ಬ್ಯಾಗ್ ಹಾಕಿದ್ದರು. ಆದರೆ, ಬ್ಯಾಗ್ ಹಾಕಿದ್ದ ಸೀಟಿನಲ್ಲಿ ಬೇರೊಬ್ಬ ಮಹಿಳೆ ಕುಳಿತುಕೊಂಡ ಹಿನ್ನೆಲೆ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಗಿದ್ದು, ಬಳಿಕ ಅದು ಗಲಾಟೆಗೆ ತಿರುಗಿದೆ. ಇದಾದ ಬಳಿಕ ಮಹಿಳೆ ತನ್ನ ಸಂಬಂಧಿಕರನ್ನು ಸ್ಥಳಕ್ಕೆ ಕರೆಸಿಕೊಂಡು ಬಸ್‌ಗೆ ಅಡ್ಡಗಟ್ಟಿ ಗಲಾಟೆ ಮಾಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ನಗರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಹರೀಶ್ ನೇತೃತ್ವದ ಪೊಲೀಸರ ತಂಡ ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಇನ್ನು ಗಲಾಟೆಯಲ್ಲಿ ಭಾಗಿಯಾಗಿದ್ದ ಇಬ್ಬರು ಪುರುಷರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.