ಇಬ್ಬರು ಮಹಿಳಾ ಅಧಿಕಾರಿಗಳಿಗೆ ಕಾನೂನು ಪಾಲಿಸಲು ಸೂಚನೆ: ಸಿಎಂ
ಬೆಂಗಳೂರು: ಇಬ್ಬರು ಮಹಿಳಾ ಅಧಿಕಾರಿಗಳು ಕಾನೂನು ಪಾಲಿಸಲು ಸೂಚಿಸಿದ್ದೇವೆ. ರೂಲ್ಸ್ ಫಾಲೋ ಮಾಡುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಐಪಿಎಸ್ ಅಧಿಕಾರಿ ಡಿ ರೂಪಾ ಹಾಗೂ ಐಎಎಸ್ ಆಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಪರಸ್ಪರ ಆರೋಪ-ಪ್ರತ್ಯಾರೋಪ, ದೂರುಗಳ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ನಿಯಮ ಪಾಲನೆ ಮಾಡುವಂತೆ ಹೇಳಿದ್ದೇವೆ. ಅವರು ರೂಲ್ಸ್ ಫಾಲೋ ಮಾಡುವ ವಿಶ್ವಾಸವಿದೆ. ಇದರ ಬಗ್ಗೆ ಮುಖ್ಯ ಕಾರ್ಯದರ್ಶಿಯೂ ಗಮನ ಹರಿಸಿದ್ದಾರೆ. ಮುಖ್ಯಕಾರ್ಯದರ್ಶಿಯವರು ಇಬ್ಬರು ಅಧಿಕಾರಿಗಳನ್ನು ಕರೆದು ಮಾತನಾಡಿದ್ದಾರೆ. ಅವರಿಗೆ ನಿರ್ದೇಶನ ನೀಡಿದ್ದಲ್ಲದೆ, ಶಿಸ್ತು ಕಾಪಾಡಿಕೊಳ್ಳಿ ಎಂದು ಹೇಳಿದ್ದಾರೆ. ಇಬ್ಬರು ಈ ಬಗ್ಗೆ ಲಿಖಿತವಾಗಿ ಬರೆದುಕೊಟ್ಟಿದ್ದಾರೆ. ನಿಯಮ ಪಾಲಿಸುತ್ತೇವೆ ಎಂದು ಬರೆದುಕೊಟ್ಟಿದ್ದಾರೆ ಎಂದು ಹೇಳಿದರು. ಭಾರತೀಯ ಸೇವಾ ನಿಯಮಾವಳಿ ಪ್ರಕಾರ ಏನಿದೆಯೋ ಅದರ ಮೇಲೆ ಪರಿಶೀಲನೆ ಮಾಡುತ್ತಿದ್ದಾರೆ. ಅದರ ಪ್ರಕಾರವೇ ಆ ಕೆಲಸ ನಡೆಯುತ್ತಿದೆ ಎಂದು ಇದೇ ವೇಳೆ ಸಿಎಂ ತಿಳಿಸಿದರು.