ಕರ್ನಾಟಕ

karnataka

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಟ್ರ್ಯಾಕ್ಟರ್

ETV Bharat / videos

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಟ್ರ್ಯಾಕ್ಟರ್: ಮೂವರ ಸಾವು - ಈಟಿವಿ ಭಾರತ ಕನ್ನಡ

By ETV Bharat Karnataka Team

Published : Dec 15, 2023, 2:08 PM IST

ನಳಂದ: ಬಿಹಾರದ ನಳಂದದಲ್ಲಿ ಅತೀ ವೇಗವಾಗಿ ಬಂದ ಟ್ರ್ಯಾಕ್ಟರ್​ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.   

ಇಲ್ಲಿಯ ಚಾಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಮೆರಾ ಬಿಹ್ತಾ ಪಥ್‌ನ ಗ್ರಾಮದ ಬಳಿ ಟ್ರ್ಯಾಕ್ಟರ್ 20 ಅಡಿ ಮೇಲಿಂದ ಹಳ್ಳಕ್ಕೆ ಬಿದ್ದಿದೆ. ಈ ವೇಳೆ ಟ್ರ್ಯಾಕ್ಟರ್​ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಕುರಿತು ಮಾಹಿತಿ ಪಡೆದು ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯ ಠಾಣಾ ಪೊಲೀಸರು ಜೆಸಿಬಿ ಸಹಾಯದಿಂದ ಟ್ರ್ಯಾಕ್ಟರ್‌  ಹೊರತೆಗೆದಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆ ಪ್ರಭಾರಿ ದಿನೇಶ್ ಕುಮಾರ್ ಮಾಹಿತಿ ನೀಡಿದ್ದು, ಮೃತರು ಮಾನಪುರದಿಂದ ಟ್ರ್ಯಾಕ್ಟರ್‌ನಲ್ಲಿ ಇಟ್ಟಿಗೆ ತುಂಬಿಕೊಂಡು ಹೋಗುತ್ತಿದ್ದರು. ಈ ವೇಳೆ, ಚಾಲಕ ವೇಗದ ಚಾಲನೆಯಿಂದ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಪೊಲೀಸ್​ ಠಾಣೆಗೆ ಮಾಹಿತಿ ನೀಡಿದ್ದಾರೆ. ಮೃತರಲ್ಲಿ ಒಬ್ಬ ಪೆಧ್ಕಾ ಗ್ರಾಮದ ನಿವಾಸಿ ಮುಖೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬರು ಟ್ರ್ಯಾಕ್ಟರ್ ಚಾಲಕನ ಮಗ ಎಂದು ತಿಳಿದು ಬಂದಿದೆ. ಒಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಕಲಬುರಗಿ: ಹಿಟ್​ ಅಂಡ್​​ ರನ್​​: ಕಾಂಗ್ರೆಸ್​ ವಿಧಾನ ಪರಿಷತ್ ಸದಸ್ಯನ ತಾಯಿ ಸಾವು

ABOUT THE AUTHOR

...view details