ವೀಣಾ ಕಾಶಪ್ಪನವರ್ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರಾದ ಕಾಂಗ್ರೆಸ್ ನಾಯಕಿ - ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್ ಕಾರು ಅಪಘಾತ
Published : Nov 20, 2023, 7:45 PM IST
ವಿಜಯಪುರ: ನಗರದ ಸಿಂದಗಿ ಬೈಪಾಸ್ ಬಳಿ ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್ ಅವರ ಕಾರು ಅಪಘಾತಕ್ಕೀಡಾಗಿದೆ. ವೀಣಾ ಕಾಶಪ್ಪನವರ್ ಅವರು ತೆರಳುತ್ತಿದ್ದ ಕಾರಿಗೆ ಅಡ್ಡಲಾಗಿ ಬಂದ ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅವರ ಕೈಗೆ ಪೆಟ್ಟಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಮತ್ತಿಬ್ಬರು ಗಾಯಗೊಂಡಿದ್ದು, ಸದ್ಯ ಎಲ್ಲ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಸುದ್ದಿ ತಿಳಿದ ಶಾಸಕ ಹಾಗೂ ವೀಣಾ ಪತಿ ವಿಜಯಾನಂದ ಕಾಶಪ್ಪನವರ್ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
''ಆಮಂತ್ರಣ ಪತ್ರಿಕೆವೊಂದನ್ನು ನೀಡಿ ಬರುತ್ತಿದ್ದಾಗ ಸಿಂದಗಿ ಬೈಪಾಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಇವರ ಕಾರು ಚಾಲಕ, ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಭಯಪಡುವಂತಹದ್ದು ಏನು ಆಗಿಲ್ಲ. ಕೈಗೆ ಸ್ವಲ್ಪ ಪೆಟ್ಟಾಗಿದೆ. ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ಇವತ್ತು ಆಸ್ಪತ್ರೆಯಲ್ಲಿ ರೆಸ್ಟ್ ಮಾಡಿ, ನಾಳೆ ಡಿಸ್ಚಾರ್ಜ್ ಮಾಡಲಾಗುವುದೆಂದು'' ವೈದ್ಯರು ತಿಳಿಸಿರುವುದಾಗಿ ವಿಜಯಾನಂದ ಕಾಶಪ್ಪನವರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಮದುವೆ ಮುಗಿಸಿ ಹಿಂತಿರುಗುವ ವೇಳೆ ಮರಕ್ಕೆ ಡಿಕ್ಕಿ ಹೊಡೆದ ಕಾರು; 6 ಮಂದಿ ಸಾವು