ಕರ್ನಾಟಕ

karnataka

ವೀರೇಂದ್ರ ಹೆಗ್ಗಡೆ

ETV Bharat / videos

ಮುನಿಗಳ ಹತ್ಯೆ ಖಂಡನೀಯ, ಇತರೆ ಮುನಿಗಳಿಗೆ ಸರ್ಕಾರ ರಕ್ಷಣೆ ಒದಗಿಸಬೇಕು: ಡಾ.ಡಿ.ವೀರೇಂದ್ರ ಹೆಗ್ಗಡೆ - ಜೈನ ಧರ್ಮ

By

Published : Jul 9, 2023, 11:00 AM IST

ಬೆಳ್ತಂಗಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ದಿಗಂಬರ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮುನಿ ಮಹಾರಾಜರ ಭೀಕರ ಕೊಲೆ ಕೃತ್ಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಖಂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ದಿಗಂಬರ ಮುನಿಗಳ ಈ ರೀತಿಯ ಹತ್ಯೆ ಇತಿಹಾಸದಲ್ಲಿಯೇ ಪ್ರಥಮ" ಎಂದು ಬೇಸರ ವ್ಯಕ್ತಪಡಿಸಿದರು.

"ಜೈನ ಧರ್ಮದಲ್ಲಿ ಪೂರ್ವ ಜನ್ಮದ ತಪ್ಪು ಅಥವಾ ಈ ಜನ್ಮದ ತಪ್ಪುಗಳಿಗೆ ಉಪಸರ್ಗಗಳನ್ನು ಅನುಭವಿಸಬೇಕಾಗುತ್ತದೆ. ಮುನಿಗಳಿಗೆ ಯಾವ ಕಾರಣಕ್ಕಾಗಿ ಈ ಉಪಸರ್ಗ ಎಂಬುದು ಗೊತ್ತಿಲ್ಲ. ಕೃತ್ಯ ಎಸಗಿದವರ ಬಂಧನ ಆಗಿರುವ ಬಗ್ಗೆ ತಿಳಿದುಬಂದಿದೆ. ಇದಕ್ಕಾಗಿ ಸರ್ಕಾರ ಮತ್ತು ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ತಪ್ಪಿತಸ್ಥರಿಗೆ ತಕ್ಷ ಶಿಕ್ಷೆಯಾಗಬೇಕು. ಮಾತ್ರವಲ್ಲದೆ, ಇತರೆ ಮುನಿಗಳಿಗೆ ಸರ್ಕಾರ ರಕ್ಷಣೆ ಕೊಡಬೇಕು" ಎಂದು ಮನವಿ ಮಾಡಿದ್ದಾರೆ. 

ಇನ್ನೊಂದೆಡೆ, ಆಘಾತಕಾರಿ ಪ್ರಕರಣದ ತನಿಖೆಯನ್ನು ಬೆಳಗಾವಿ ಪೊಲೀಸರು ಮುಂದುವರೆಸಿದ್ದಾರೆ.

ಇದನ್ನೂ ಓದಿ :Jain monk murder : ನಾಪತ್ತೆಯಾಗಿದ್ದ ಚಿಕ್ಕೋಡಿಯ ಜೈನಮುನಿ ಹತ್ಯೆ.. ವೈಯಕ್ತಿಕ ಕಾರಣಕ್ಕೆ ಕೊಲೆ - ಎಸ್ಪಿ ಮಾಹಿತಿ

ABOUT THE AUTHOR

...view details