ಉತ್ತರಾಖಂಡ: 16 ಜನರ ಸಾವಿಗೆ ಕಾರಣವಾದ ಟ್ರಾನ್ಸ್‌ಫಾರ್ಮರ್ ಸ್ಫೋಟದ ವಿಡಿಯೋ
ಉತ್ತರಾಖಂಡ:ರಾಜ್ಯದ ಚಮೋಲಿ ಎಂಬಲ್ಲಿ ನಿನ್ನೆ (ಬುಧವಾರ) ಭೀಕರ ವಿದ್ಯುತ್ ಅವಘಡ ಸಂಭವಿಸಿತ್ತು. ಒಳಚರಂಡಿ ಸಂಸ್ಕರಣಾ ಘಟಕದಲ್ಲಿ ವಿದ್ಯುತ್ಪರಿವರ್ತಕ (ಟ್ರಾನ್ಸ್‌ಫಾರ್ಮರ್) ಸ್ಫೋಟಗೊಂಡು 16 ಜನರು ಸಾವನ್ನಪ್ಪಿದ್ದರು. 11 ಜನ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಘಟನೆಯ ದೃಶ್ಯ ದೊರೆತಿದೆ. ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಜನರು ಓಡಾಡುತ್ತಿರುವುದು ವಿಡಿಯೋದಲ್ಲಿದೆ.
ಘಟನೆಯಲ್ಲಿ ಮೃತಪಟ್ಟವರಲ್ಲಿ ಓರ್ವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು 3 ಹೋಮ್ ಗಾರ್ಡ್ಗಳು ಸೇರಿದ್ದಾರೆ. ಸಿಎಂ ಪುಷ್ಕರ್ ಸಿಂಗ್ ಧಾಮಿ ಘಟನೆಯನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯ ಪ್ರಕಾರ, ಅಲಕನಂದಾ ನದಿ ದಡದಲ್ಲಿ ನಮಾಮಿ ಗಂಗೆ ಯೋಜನೆಯ ಕಾಮಗಾರಿ ನಡೆಯುತ್ತಿದೆ. ಮಂಗಳವಾರ ರಾತ್ರಿ ಸ್ಥಳದಲ್ಲಿ ವಿದ್ಯುತ್ ಸ್ಥಗಿತಗೊಂಡಿತ್ತು. ಬುಧವಾರ ಬೆಳಿಗ್ಗೆ ಸಂಪರ್ಕ ಕಲ್ಪಿಸಲಾಗಿತ್ತು. ಆಗ ವಿದ್ಯುತ್ ಪ್ರವಹಿಸಿದೆ. ಅಲ್ಲಿದ್ದವರು ಶಾಕ್ಗೆ ಒಳಗಾಗಿ ಸಾವನ್ನಪ್ಪಿದ್ದಾರೆ. ಇದನ್ನು ತಿಳಿದ ಜನರು ಅಲ್ಲಿಗೆ ಧಾವಿಸಿ ಬಂದಿದ್ದು ಅವರಿಗೂ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಜೀವನೋಪಾಯಕ್ಕೆ ಇಟ್ಟುಕೊಂಡಿದ್ದ ಬಟ್ಟೆ ಅಂಗಡಿ ಭಸ್ಮ: ಬೆಸ್ಕಾಂ ಅಧಿಕಾರಿಗಳಿಂದ ನಿರ್ಲಕ್ಷ್ಯ ಆರೋಪ