ಮಹಾರಾಷ್ಟ್ರದ ಅಕೋಲಾದಲ್ಲಿ ಘರ್ಷಣೆ: 8 ಮಂದಿಗೆ ಗಾಯ, ವಾಹನಗಳಿಗೆ ಬೆಂಕಿ, ನಿಷೇಧಾಜ್ಞೆ ಜಾರಿ - ಹಿಂಸಾತ್ಮಕ ಘರ್ಷಣೆ
ಮಹಾರಾಷ್ಟ್ರ: ಶನಿವಾರ (ನಿನ್ನೆ) ಅಕೋಲಾದ ಓಲ್ಡ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸಿಆರ್‌ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಘಟನೆಯಿಂದ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ಅಕೋಲಾ ಎಸ್ಪಿ ಸಂದೀಪ್ ಘುಗೆ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, "ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಘರ್ಷಣೆ ಪ್ರಾರಂಭವಾಗಿದೆ. ಎರಡೂ ಕಡೆಯವರು ಕಲ್ಲು ತೂರಾಟ ನಡೆಸಿದ್ದಾರೆ. ಕಾರು, ಬೈಕ್ ಗಳಿಗೆ ಹಾನಿಯಾಗಿದೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ತನಿಖೆ ನಡೆಸುತ್ತಿದ್ದೇವೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯಕ್ಕೆ 26 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಇಬ್ಬರು ಪೊಲೀಸರು ಸೇರಿದಂತೆ 8 ಮಂದಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ" ಎಂದು ತಿಳಿಸಿದರು.
ಇದನ್ನೂ ಓದಿ :ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ನಿಂದ ಪೆಟ್ರೋಲ್ ತೆಗೆದು ಬೆಂಕಿ ಹಚ್ಚಿದ ಮಹಿಳೆ : ವಿಡಿಯೋ