ಎದೆನೋವಿನಿಂದ ಕುಸಿದು ಬಿದ್ದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡಿದ ಸಿಐಎಸ್‌ಎಫ್ ಸಿಬ್ಬಂದಿ -ವಿಡಿಯೋ
ಚೆನ್ನೈ(ತಮಿಳುನಾಡು) : ಚೆನ್ನೈ ವಿಮಾನ ನಿಲ್ದಾಣದಲ್ಲಿ ಎದೆನೋವಿನಿಂದಾಗಿ ಕುಸಿದು ಬಿದ್ದ ಪ್ರಯಾಣಿಕರಿಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿಯೋರ್ವರು ಪ್ರಥಮ ಚಿಕಿತ್ಸೆ ನೀಡಿದ ವಿಡಿಯೋ ವೈರಲ್ ಆಗಿದೆ. ಪಶ್ಚಿಮ ಬಂಗಾಳದ ದುರ್ಗಾಪುರದ ಶೇಖರ್ ಹಜಾರಾ ಎಂಬವರು ವೈದ್ಯಕೀಯ ಚಿಕಿತ್ಸೆಗಾಗಿ ನಿನ್ನೆ ರಾತ್ರಿ ಚೆನ್ನೈಗೆ ಬಂದಿದ್ದರು. ಚೆನ್ನೈ ವಿಮಾನ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಯೊಬ್ಬರು ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶೇಖರ್ ಹಜಾರ ಅವರನ್ನು ಆ್ಯಂಬುಲೆನ್ಸ್ ಮೂಲಕ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
Last Updated : Feb 3, 2023, 8:28 PM IST