ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಸೆಕೆ.. ಮಳೆಗಾಗಿ ದೇವಸ್ಥಾನ, ದೈವಸ್ಥಾನಗಳಲ್ಲಿ ಪ್ರಾರ್ಥನೆ - ದೈವಸ್ಥಾನಗಳಲ್ಲಿ ಪ್ರಾರ್ಥನೆ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷ ವಿಪರೀತ ಸೆಕೆ ಕಾಡುತ್ತಿರುವುದರಿಂದ ವಿವಿಧ ದೇವಸ್ಥಾನ, ದೈವಸ್ಥಾನಗಳಲ್ಲಿ ಮಳೆಗಾಗಿ ಪ್ರಾರ್ಥನೆ ನಡೆಯಿತು. ವಿಶ್ವ ಹಿಂದೂ ಪರಿಷತ್ನ ಮಂಗಳೂರು ವಿಭಾಗ ನೀಡಿದ ಕರೆಯಂತೆ ಜಿಲ್ಲೆಯ ವಿವಿಧ ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ಪ್ರಾರ್ಥನೆ ನಡೆಯಿತು. ಮಂಗಳೂರಿನ ಕದ್ರಿ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವಿಹಿಂಪ ಮುಖಂಡರುಗಳಾದ ಎಂ.ಬಿ ಪುರಾಣಿಕ್, ಶರಣ್ ಪಂಪ್ ವೆಲ್ ಸೇರಿದಂತೆ ಹಲವಾರು ಮಂದಿ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದೆಂದೂ ಇಲ್ಲದಂತಹ ವಿಪರೀತ ಸೆಕೆ ಇದೆ. ಹಗಲು ಹೊತ್ತಿನಲ್ಲಿ ವಿಪರೀತ ಸೆಕೆಗೆ ಜನರು ಸಂಕಷ್ಟ ಪಡುತ್ತಿದ್ದಾರೆ. ಇನ್ನೂ ನದಿಗಳು ಬತ್ತಿ ಹೋಗಿದೆ. ಕುಡಿಯುವ ನೀರಿಗೆ ಅಭಾವ ಉಂಟಾಗುವ ಸಾಧ್ಯತೆ ಇದೆ. ಇನ್ನೂ ಮಳೆ ಬಾರದೇ ಇದ್ದಲ್ಲಿ ನೀರಿನ ಅಭಾವವಾಗಿ ಜನ ಜೀವನ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಮಳೆಗಾಗಿ ದೇವರ ಮೊರೆ ಹೋಗಿದೆ.
ಇದನ್ನೂ ಓದಿ:ವರುಣನ ಕೃಪೆಗಾಗಿ ಕಪ್ಪೆಗಳ ಮದುವೆ.. ಸುರಿದ ಮಳೆ, ಗ್ರಾಮಸ್ಥರು ಖುಷ್