ಕರ್ನಾಟಕ

karnataka

ಹೊಸ ಸರ್ಕಾರಕ್ಕೆ 2 ದಿನ ಬಾಕಿ; ಬಿಗಿ ಬಂದೋಬಸ್ತ್​ನಲ್ಲಿ ನಡೆಯಲಿದೆ ಮತ ಎಣಿಕೆ

By

Published : May 11, 2023, 2:38 PM IST

ಮತ ಎಣಿಕೆ

ಬೆಂಗಳೂರು:ನಿನ್ನೆಯಷ್ಟೇ ಮತದಾನದ ಹಬ್ಬ ಮುಗಿದಿದ್ದು, ಇನ್ನೆರಡು ದಿನಗಳಲ್ಲಿ ಫಲಿತಾಂಶ ಬರಲಿದೆ. ಸ್ಪರ್ಧಿಸಿದ ಅಭ್ಯರ್ಥಿಗಳೆಲ್ಲ ರಿಲಾಕ್ಸ್​ ಮೂಡ್​ಗೆ ಜಾರಿದ್ದಾರೆ. ಮತ್ತೊಂದೆಡೆ ಮತ ಎಣಿಕೆ ಕೇಂದ್ರಗಳಲ್ಲಿ ಬೆಂಗಳೂರಿನ ನಗರದ 28 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಅಡಕವಾಗಿದೆ. 2615 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದ್ದು ಶನಿವಾರ ಅಭ್ಯರ್ಥಿಗಳ ಭವಿಷ್ಯ ಅಡಗಿದೆ.

ಚುನಾವಣಾ ಕಣದಲ್ಲಿ 2430 ಪುರುಷ ಅಭ್ಯರ್ಥಿಗಳು 184 ಮಹಿಳಾ ಅಭ್ಯರ್ಥಿಗಳು, ಒಬ್ಬರು ತೃತೀಯ ಲಿಂಗಿ ಅಭ್ಯರ್ಥಿಯಿದ್ದಾರೆ. ಶನಿವಾರ ಬೆಳಗ್ಗೆ 8 ರಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿ ವಿಂಗಡಿಸಲಾಗಿದೆ. ಪ್ರತಿ ಟೇಬಲ್​ಗೆ ಮೈಕ್ರೋ ಅಬ್ಸರ್ವರ್, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಪ್ರತಿ ಎಣಿಕಾ ಕೊಠಡಿಗೆ ಸಾಮಾನ್ಯವಾಗಿ 10 ರಿಂದ 14 ಟೇಬಲ್​ಗಳ ವ್ಯವಸ್ಥೆ ಮಾಡಲಾಗಿದೆ. 

2 ಟೇಬಲ್ ಗಳನ್ನು ಪೋಸ್ಟಲ್ ಬ್ಯಾಲೆಟ್ ಮತಗಳ ಎಣಿಕೆಗೆ ಮೀಸಲಿರಿಸಲಾಗಿದೆ. ಪ್ರತಿ ಟೇಬಲ್​ಗಳಿಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆಯಿರಲಿದೆ. ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಯಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ನಾಳೆ ಮತ್ತೊಮ್ಮೆ ಮೈಕ್ರೋ ಅಬ್ಸರ್ವರ್ಸ್, ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಕರಿಗೆ ತರಬೇತಿ ನೀಡಲಾಗುತ್ತದೆ. ಮತ ಎಣಿಕೆ ಕೇಂದ್ರದಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಸಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ ಮೂರು ಹಂತದದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆಯಿರಲಿದೆ. 

ಬೆಂಗಳೂರಿನ ಮತ ಎಣಿಕೆ ಕೇಂದ್ರಗಳ ವಿವರ:ಬೆಂಗಳೂರು ಕೇಂದ್ರವಾಗಿರುವ ಬಿಎಂಎಸ್ ಕಾಲೇಜು, ಬೆಂಗಳೂರು ದಕ್ಷಿಣ:ಎಸ್.ಎಸ್.ಎಂ.ಆರ್.ವಿ ಪಿಯು ಕಾಲೇಜು, ಬೆಂಗಳೂರು ಉತ್ತರ- ಮೌಂಟ್ ಕಾರ್ಮಲ್ ಕಾಲೇಜು ಹಾಗೂ ಬೆಂಗಳೂರು ನಗರ-ಸೆಂಜ್ ಜೋಸೆಫ್ ಇಂಡಿಯನ್ ಹೈ ಸ್ಕೂಲ್​ನಲ್ಲಿ 28 ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. ನಗರದ ನಾಲ್ಕು ಮತ ಎಣಿಕೆ ಕೇಂದ್ರಗಳ ಸ್ಟ್ರಾಂಗ್ ರೂಮ್​ಗಳಿಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತಲೂ ಸಿಸಿಟಿವಿ ಅಳವಡಿಸಲಾಗಿದ್ದು, ಬಿಎಸ್ ಎಫ್ , CRPF, KSRP ತುಕಡಿ ಸೇರಿದಂತೆ ಸ್ಥಳೀಯ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ:ಮುಗಿದ ಚುನಾವಣೆ ತಲೆಬಿಸಿ: ರಿಲಾಕ್ಸ್ ಮೂಡ್​ನಲ್ಲಿ ನಾಯಕರು, ಆಪ್ತರೊಂದಿಗೆ ಚಹಾಕೂಟ

ABOUT THE AUTHOR

...view details