ಕರ್ನಾಟಕ

karnataka

ಮೈಸೂರಿನಲ್ಲಿ ಸಂಭ್ರಮದ ವಿಶ್ವ ಪ್ರವಾಸೋದ್ಯಮ ದಿನ

ETV Bharat / videos

Watch: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮದ ವಿಶ್ವ ಪ್ರವಾಸೋದ್ಯಮ ದಿನ - ಮೈಸೂರಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನ

By ETV Bharat Karnataka Team

Published : Sep 27, 2023, 8:04 PM IST

ಮೈಸೂರು : ಇಂದು ವಿಶ್ವ ಪ್ರವಾಸೋದ್ಯಮ ದಿನ. ಪ್ರವಾಸಿ ನಗರಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಅರಮನೆ ಆಡಳಿತ ಮಂಡಳಿ, ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ಈ ದಿನವನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. 

ವಿವಿಧ ಕಲಾ ತಂಡಗಳು ಮೆರವಣಿಗೆ ಮೂಲಕ ಅರಮನೆ ಮುಂಭಾಗದಲ್ಲಿ ಸಾಗಿ ಬಲರಾಮ ದ್ವಾರದ ಮೂಲಕ ಕೆ ಆರ್ ಸರ್ಕಲ್, ಸೈಯಾಜಿರಾವ್ ರಸ್ತೆ, ಆಯುರ್ವೇದ ವೃತ್ತದವರೆಗೆ ಸಾಗಿದವು. ಈ ಮೆರವಣಿಗೆಯಲ್ಲಿ ದಸರಾದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಐದು ಆನೆಗಳು ಭಾಗವಹಿಸಿದ್ದು ವಿಶೇಷವಾಗಿತ್ತು. 

''ಮೈಸೂರಿಗೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಣೆ ಮಾಡುವ ಉದ್ದೇಶದಿಂದ ವಿಶ್ವ ಪ್ರವಾಸೋದ್ಯಮ ದಿನ ಆಚರಿಸಲಾಗುತ್ತಿದೆ. ಪ್ರವಾಸಿಗರ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಅವರಿಗೆ ಬೇಕಾದ ಕೆಲವು ಪೂರಕ ವಾತಾವರಣ ಸೃಷ್ಟಿ ಮಾಡುವ ಅನಿವಾರ್ಯತೆ ಇದೆ. ಆ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ಕಾರ್ಯಕ್ರಮವನ್ನು ರೂಪಿಸಬೇಕಾಗಿದೆ ಎಂದು ಈ ವೇಳೆ ಹಾಜರಿದ್ದ ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಹೇಳಿದರು.

ವಿಶ್ವ ಪ್ರವಾಸೋದ್ಯಮ ದಿನದ ನಿಮಿತ್ತ ಇಂದು ಅರಮನೆಯಲ್ಲಿ ಸಂಜೆ 7 ರಿಂದ 8:30ರ ವರೆಗೆ ದೀಪಾಲಂಕಾರ ಇರುತ್ತದೆ. ಪ್ರವೇಶ ಶುಲ್ಕವಿಲ್ಲದೇ ಅರಮನೆಯ ದ್ವಾರದ ಮೂಲಕ ಆಗಮಿಸಿ ಈ ದೀಪಾಲಂಕಾರವನ್ನು ಆನಂದಿಸಬಹುದು ಎಂದು ಅರಮನೆಯ ಆಡಳಿತ ಮಂಡಳಿಯ ಉಪ ನಿರ್ದೇಶಕ ಸುಬ್ರಮಣ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇದನ್ನೂ ಓದಿ :ರಾಷ್ಟ್ರಧ್ವಜ ತಯಾರಿಸುವ ಸಂಘಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ABOUT THE AUTHOR

...view details