ಕರ್ನಾಟಕ

karnataka

ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ

ETV Bharat / videos

ಅಕ್ಕಿ ವಿತರಣೆ ಗೊಂದಲ : ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಹೇಳಿದ್ದೇನು? - ಈಟಿವಿ ಭಾರತ್​ ಕನ್ನಡ ನ್ಯೂಸ್

By

Published : Jun 18, 2023, 4:14 PM IST

ಶಿವಮೊಗ್ಗ :ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಉದ್ದೇಶ ಪೂರ್ವಕವಾಗಿ ಗೊಂದಲ ಉಂಟು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲಿಕ್ಕೆ ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ. ಎಲ್ಲಿಯಾದ್ರೂ ಖರೀದಿ ಮಾಡಿ ಕೊಡಲಿ ಎಂದರು.

ವಿಧಾನಸಭಾ ಚುನಾವಣೆ ಪೂರ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅದರಂತೆ ಅಕ್ಕಿ ವಿತರಣೆ ಮಾಡಬೇಕು. ವಿತರಣೆ ಮಾಡುವ ಅಕ್ಕಿಯಲ್ಲಿ ಒಂದು ಗ್ರಾಮ್ ಕಡಿಮೆಯಾದರು ಜನ ಅದನ್ನು ಒಪ್ಪಲ್ಲ. ಅವರು ಕೊಟ್ಟ ಭರವಸೆಯನ್ನು ಈಡೇರಿಬೇಕು ಎಂದು ಬಿಎಸ್​ವೈ ಒತ್ತಾಯಿಸಿದರು.

ಕಾಂಗ್ರೆಸ್​ ನವರು​ ಕೇಂದ್ರ ಸರ್ಕಾರವನ್ನು ಅನಗತ್ಯವಾಗಿ ದೂಷಣೆ ಮಾಡೋದು ಸರಿಯಲ್ಲ. ಯಾವುದೇ ಸಮಯದಲ್ಲೂ ಪ್ರಧಾನಿ ಮೋದಿಯವರು ಹೆಚ್ಚುವರಿ ಅಕ್ಕಿ ಕೊಡುತ್ತೇವೆ ಎಂದು ಹೇಳಿಲ್ಲ. ಈಗ ಉಚಿತವಾಗಿ ಕೊಡುತ್ತಿರೋದು ಕೂಡ ಕೇಂದ್ರ ಸರ್ಕಾರವೇ. ಆದರೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​ ವಿನಾಕಾರಣ ರಾಜ್ಯದ ಜನರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ಕಿಡಿಕಾಡಿದರು. 

ಇನ್ನು, ಇದೇ ವೇಳೆ ವಿಪಕ್ಷ ನಾಯಕ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ ಸದನ ಆರಂಭವಾಗುವುದರೊಳಗೆ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ. ಅದರಲ್ಲಿ ಏನು ವಿಶೇಷತೆ ಇಲ್ಲ ಎಂದು ಬಿಎಸ್​ವೈ ಸ್ಪಷ್ಟಪಡಿಸಿದರು.       

ಇದನ್ನೂ ಓದಿ :ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ: ಗೇಟ್​ವರೆಗೂ ಬಂದು ಸ್ವಾಗತ ಕೋರಿದ ಯಡಿಯೂರಪ್ಪ

ABOUT THE AUTHOR

...view details