ಕರ್ನಾಟಕ

karnataka

ಮೂಡಿಗೆರೆಯಲ್ಲಿ ಕಾಡಾನೆಗಳು ಪ್ರತ್ಯಕ್ಷ: ಸಾರ್ವಜನಿಕರು ಎಚ್ಚರದಿಂದಿರುವಂತೆ ಅರಣ್ಯ ಇಲಾಖೆ ಮನವಿ

ETV Bharat / videos

ಮೂಡಿಗೆರೆಯಲ್ಲಿ ಕಾಡಾನೆಗಳು ಪ್ರತ್ಯಕ್ಷ; ರೈತರಲ್ಲಿ ಆತಂಕ - etv bharat kannada

By

Published : Aug 4, 2023, 10:24 PM IST

ಚಿಕ್ಕಮಗಳೂರು:ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದಲ್ಲಿ ಕಾಡಾನೆಗಳು ಸುತ್ತಾಟ ನಡೆಸುತ್ತಿವೆ. ಗದ್ದೆ, ತೋಟಗಳಲ್ಲಿ ಎರಡು ಕಾಡಾನೆಗಳು ಅತ್ತಿಂದಿತ್ತ ಓಡಾಡುತ್ತಿರುವ ದೃಶ್ಯ ಸೆರೆಯಾಗಿದೆ. ಹೀಗಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಬಡವನದಿಣ್ಣೆ, ಮೂಡಿಗೆರೆ, ಕೊಟ್ಟಿಗೆಹಾರ ಮುಖ್ಯ ರಸ್ತೆ ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿದೆ. ಆನೆಗಳು ಮುಖ್ಯರಸ್ತೆಗೆ ಬರುವ ಆತಂಕವಿದೆ.

ಗುರುವಾರ ರಾತ್ರಿಯಿಂದ ಕಾಡಾನೆಗಳು ಗ್ರಾಮದಲ್ಲಿ ಬೀಡುಬಿಟ್ಟಿವೆ. ಕಾಫಿ ತೋಟಗಳಿಗೆ ಹಾನಿ ಮಾಡುತ್ತಿವೆ. ಇದರಿಂದ ರೈತರು ನಷ್ಟಕ್ಕೊಳಗಾಗುತ್ತಿದ್ದಾರೆ. ಅರಣ್ಯ ಸಿಬ್ಬಂದಿ ಮತ್ತು ಗ್ರಾಮಸ್ಥರು ಕಾಡಾನೆಗಳನ್ನು ಕಾಡಿಗಟ್ಟಲು ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಆನೆಗಳು ಸ್ಥಳ ಬಿಟ್ಟು ಕದಲುತ್ತಿಲ್ಲ. ಈ ಭಾಗದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಈ ಪ್ರದೇಶದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗುತ್ತಿದ್ದು, ಇದರಿಂದ ರೈತರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿನಿತ್ಯ ಕಾಡಾನೆ ದಾಳಿಯಿಂದ ಲಕ್ಷಾಂತರ ಮೌಲ್ಯದ ಕಾಫಿ, ಮೆಣಸು, ಏಲಕ್ಕಿ, ಬೆಳೆ ನಾಶವಾಗುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಕೊಡಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಕಾಡಾನೆಗಳನ್ನು ಸೆರೆಹಿಡಿದು ಕಾಡಿಗಟ್ಟಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ:ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು.. ಗಜಪಡೆ ನಡೆದಿದ್ದೇ ಹಾದಿ

ABOUT THE AUTHOR

...view details