ಕರ್ನಾಟಕ

karnataka

ಚಾಮರಾಜನಗರದಲ್ಲಿ ನಡೆದ ಆನೆ ಸೆರೆ ಕಾರ್ಯಚರಣೆ

ETV Bharat / videos

ಆಪರೇಷನ್ ಪುಂಡಾನೆ ಸಕ್ಸಸ್ : ಅರ್ಜುನನ ಚಕ್ರವ್ಯೂಹಕ್ಕೆ ಕಾಡಾನೆ ಬಂಧಿ

By

Published : Aug 19, 2023, 1:00 PM IST

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಉಪಟಳ‌ ಕೊಡುತ್ತಿದ್ದ ಪುಂಡಾನೆಯನ್ನು ಅರ್ಜುನ ಮತ್ತು ತಂಡ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪೊನ್ನಾಚಿ ಗ್ರಾಮದ ಸುತ್ತಮುತ್ತ ತೊಂದರೆ ನೀಡುತ್ತಿದ್ದ ಕಾಡಾನೆಯನ್ನು ಗೆರಟ್ಟಿಕತ್ರಿ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿಯಲಾಗಿದೆ.  

ಅರ್ಜುನ ಆನೆ ನಾಯಕತ್ವದಲ್ಲಿ ಒಟ್ಟು 6 ಆನೆಗಳು ಮತ್ತು 100 ಕ್ಕೂ ಹೆಚ್ಚು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಕಳೆದ ಎರಡು ವರ್ಷಗಳಿಂದ ಕಾಡಂಚಿನ ಜನರಿಗೆ ವ್ಯಾಪಕ ತೊಂದರೆ ಕೊಡುತ್ತಿದ್ದ ಪುಂಡಾನೆಯನ್ನು ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದರು. ಜಮೀನಿನಲ್ಲಿರುವ ಫಸಲು ತಿಂದು ಹಾಳು ಮಾಡುವುದರ ಜೊತೆಗೆ ಮನೆ ಹತ್ತಿರ ಬಂದು ಗೇಟ್, ಗೋಡೆ ಹಾಗೂ ತೆಂಗಿನ ಮರ ನಾಶಗೊಳಿಸುತ್ತಿದೆ ಎಂದು ಜನರು ಆತಂಕ ವ್ಯಕ್ತಪಡಿಸಿದ್ದರು. ಗ್ರಾಮಸ್ಥರ ತೀವ್ರ ಒತ್ತಡಕ್ಕೆ ಮಣಿದ ಅರಣ್ಯ ಇಲಾಖೆ, ಕಾರ್ಯಾಚರಣೆ ಆರಂಭಿಸಿ ಆನೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. 

ಇದನ್ನೂ ಓದಿ :ಮಾದಪ್ಪನ ಬೆಟ್ಟದ ತಪ್ಪಲಿನಲ್ಲಿ ಪುಂಡಾನೆ ಸೆರೆಗೆ ಮುಂದಾದ ಅರ್ಜುನ ಅಂಡ್​​ ಟೀಂ

ABOUT THE AUTHOR

...view details