ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾವಳಿ: ಬೆಳೆ ನಾಶ, ರೈತರು ಕಂಗಾಲು - etv bharat kannada
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತೀವ್ರವಾಗುತ್ತಿದ್ದು ಅಡಿಕೆ, ಬಾಳೆ ತೋಟ ನಾಶವಾಗುತ್ತಿದೆ. ತರೀಕೆರೆ ತಾಲೂಕಿನಲ್ಲಿ ಈ ರೀತಿಯ ಘಟನೆಗಳು ಸಾಮಾನ್ಯ ಎನ್ನುವಂತಾಗಿದೆ. ಈಗಾಗಲೇ ನಾಲ್ಕು ಎಕರೆ ಅಡಿಕೆ, ಬಾಳೆ ನಾಶವಾಗಿದ್ದು, ರೈತರು ಬೇಸರ ಹೊರ ಹಾಕುತ್ತಿದ್ದಾರೆ. ಅರಣ್ಯ ಇಲಾಖೆ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಭದ್ರಾ ವನ್ಯಜೀವಿ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ರೀತಿಯ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಮತ್ತು ಶಾಶ್ವತ ಪರಿಹಾರ ನೀಡಬೇಕೆಂದು ಅಧಿಕಾರಿಗಳಲ್ಲಿ ರೈತರು ಮನವಿ ಮಾಡಿದ್ದಾರೆ.
Last Updated : Feb 3, 2023, 8:38 PM IST