ಹೋರಾಟ ಇರೋದು ನನ್ನ ಮತ್ತು ಕಾಂಗ್ರೆಸ್ ನಡುವೆ: ಮಲ್ಲಿಕಾರ್ಜುನ ಚರಂತಿಮಠ
ಬಾಗಲಕೋಟೆ:ಬಿಜೆಪಿ ಬಂಡಾಯ ಹಾಗೂ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಚರಂತಿಮಠ ಅವರು ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ನಗರದಲ್ಲಿ 'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಅವರು ಸುಮಾರು 20 ಸಾವಿರ ಮತಗಳ ಅಂತರದಿಂದ ಜಯ ಗಳಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೇ ತಮ್ಮ ಪ್ರತಿ ಸ್ಪರ್ಧಿ ಕಾಂಗ್ರೆಸ್ ಎನ್ನುವ ಮೂಲಕ ಅವರ ಸಹೋದರ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಟಾಂಗ್ ನೀಡಿದರು.
ಬಾಗಲಕೋಟೆ ನಗರದಲ್ಲಿ ರಸ್ತೆ, ಚರಂಡಿ ಮಾತ್ರ ಅಭಿವೃದ್ಧಿ ಮಾಡದೇ ಸ್ಥಳೀಯ ಸಂತ್ರಸ್ತರಿಗೆ ಮೂಲ ಸೌಲಭ್ಯ ಒದಗಿಸುವುದು, ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೈಗಾರಿಕಾ ಅಭಿವೃದ್ಧಿ ಜತೆಗೆ ಇತರ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಬೆಳಗಿನ ಜಾವ ನಗರ ಪ್ರದೇಶದಲ್ಲಿ ಹಾಗೂ ಸಂಜೆ ಸಮಯದಲ್ಲಿ ಗ್ರಾಮೀಣ ಭಾಗದಲ್ಲಿ ಪ್ರಚಾರ ಕಾರ್ಯ ಮಾಡುತ್ತಿದ್ದೇನೆ. ಪಕ್ಷೇತರ ಅಭ್ಯರ್ಥಿಯಾಗಿದ್ದರೂ ಯಾವ ಮುಖಂಡರು ಸಂಪರ್ಕ ಮಾಡಿಲ್ಲ. ಹೀಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೇನೆ. ಆಟೋ ಚಿಹ್ನೆ ದೊರಕಿದೆ. ಆಟೋ ಚಾಲಕರಿಗೆ ಬಡಾವಣೆ ಸೇರಿದಂತೆ, ಸಂತ್ರಸ್ತರ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಮಲ್ಲಿಕಾರ್ಜುನ ಚರಂತಿಮಠ ಭರವಸೆ ನೀಡಿದರು.
ಇದನ್ನೂ ಓದಿ:ಬಾಗಲಕೋಟೆಯಲ್ಲಿ ಸಹೋದರರ ಸವಾಲ್; ಬೃಹತ್ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನ