ಬಳ್ಳಾರಿ: ಪೆಟ್ರೋಲ್ ಟ್ಯಾಂಕರ್ ಹರಿದು ಮಹಿಳೆ ಸ್ಥಳದಲ್ಲೇ ಸಾವು - etv bharat karnataka
Published : Dec 24, 2023, 6:54 PM IST
|Updated : Dec 24, 2023, 7:19 PM IST
ಬಳ್ಳಾರಿ:ಪಾದಚಾರಿಗಳ ಮೇಲೆ ಪೆಟ್ರೋಲ್ ಟ್ಯಾಂಕರ್ ಹರಿದು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಮೋತಿ ವೃತ್ತದಲ್ಲಿ ನಡೆದಿದೆ. ರಫಿಯಾ ಬೇಗಂ (26) ಮೃತರು. ಮತ್ತೋರ್ವ ಮಹಿಳೆ ಸಬೀನಾ ಕಾಲಿನ ಮೇಲೆ ಪೆಟ್ರೋಲ್ ಟ್ಯಾಂಕರ್ ಹರಿದಿದೆ. ಗಾಯಾಳುವನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಳ್ಳಾರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿ ಹರಿದು ಶಿಕ್ಷಕ ಸಾವು:ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇತ್ತೀಚಿಗೆ ಕಾರವಾರ ನಗರದ ಹಬ್ಬುವಾಡದಲ್ಲಿ ನಡೆದಿತ್ತು. ಕಿನ್ನರ ಮೂಲದ ಉಮೇಶ ಗುನಗಿ (50) ಮೃತರು. ಬೈಕ್‌ನಲ್ಲಿ ದೇವಳಮಕ್ಕಿ ಶಾಲೆಗೆ ತೆರಳುತ್ತಿದ್ದಾಗ ಕೈಗಾ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬಿದ್ದ ಶಿಕ್ಷಕನ ಮೇಲೆ ಲಾರಿ ಹರಿದು ದುರ್ಘಟನೆ ಸಂಭವಿಸಿತ್ತು. ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ, ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಘಟನೆಗೆ ಕಾರಣ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೂಡಲೇ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸ್ಥಳಕ್ಕೆ ಆಗಮಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ರಾಯಬಾಗದಲ್ಲಿ ಕಾರು ಡಿಕ್ಕಿಯಾಗಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ; ಸಿಸಿಟಿವಿ ವಿಡಿಯೋ