ಹುಬ್ಬಳ್ಳಿ: ನಡು ರಸ್ತೆಯಲ್ಲಿ ಅಡುಗೆ ಮಾಡಿ ಗ್ಯಾಸ್ ಬೆಲೆ ಏರಿಕೆ ಖಂಡಿಸಿದ ಮಹಿಳೆಯರು - politics
ಹುಬ್ಬಳ್ಳಿ:ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ನಡು ರಸ್ತೆಯಲ್ಲಿ ಅಡುಗೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಗರದ ಕೇಶ್ವಾಪುರದ
ಸರ್ವೋದಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಲೆಯ ಮೇಲೆ ಸೌದೆ ಹೊತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿದರು. ದೇಶದಲ್ಲಿ ಗ್ಯಾಸ್ ದರವಲ್ಲದೆ ದಿನಬಳಕೆ ವಸ್ತುಗಳ ಬೆಲೆಯೂ ಕೂಡ ಗಗನಕ್ಕೇರಿದೆ. ಇದರಿಂದ ಮಧ್ಯಮ ವರ್ಗದ ಜನರು, ಬಡವರು ಜೀವನ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಕೂಡಲೇ ಕೇಂದ್ರ ಸರ್ಕಾರ ಗ್ಯಾಸ್ ಬೆಲೆ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು. ಈಗಾಗಲೇ ಮೇಲಿಂದ ಮೇಲೆ ಬೆಲೆ ಏರಿಕೆ ಮಾಡಿ ಬಡವರ ಹೊಟ್ಟೆಯ ಮೇಲೆ ಹೊಡೆದಿದೆ. ಈಗ ಮತ್ತೆ ಬೆಲೆ ಏರಿಕೆ ಮಾಡಿ ಬಡವರನ್ನು ಸಂಕಷ್ಟಕ್ಕೆ ದೂಡಿದೆ. ಕೂಡಲೇ ಗ್ಯಾಸ್ ಬೆಲೆಯನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ:ಬಿಜೆಪಿಯದ್ದು ವಿಜಯ ಸಂಕಲ್ಪ ಯಾತ್ರೆಯಲ್ಲ, ಕ್ಷಮಾಪಣಾ ಯಾತ್ರೆ: ರಣದೀಪ್ ಸುರ್ಜೇವಾಲಾ