VIDEO: ಬೈಕ್ ಮೇಲೆ ನಿಂತು ರೀಲ್ಸ್ ಮಾಡುವಾಗ ಬಿದ್ದು ಯುವಕನಿಗೆ ಗಂಭೀರ ಗಾಯ
ಹುಬ್ಬಳ್ಳಿ:ಇತ್ತೀಚೆಗೆ ರೀಲ್ಸ್ ಗೀಳಿನಿಂದ ಯುವಕರು ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಅಣ್ಣೀಗೆರಿ ರಸ್ತೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ನಿವಾಸಿ ಸಮೀರ್ ಎಂಬಾತನೇ ಗಂಭೀರವಾಗಿ ಗಾಯಗೊಂಡವ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ರಸ್ತೆಯಲ್ಲಿ ರಿಲ್ಸ್ ಮಾಡುತ್ತಿದ್ದ ಸಮೀರ್ ಬೈಕ್ ಮೇಲೆ ನಿಂತು ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.
ಬೈಕ್ ಮೇಲೆ ನಿಂತು ರೀಲ್ಸ್ ಮಾಡುವಾಗ ಸ್ವಲ್ಪ ದೂರದವರೆಗೆ ತೆರಳಿದ ಬಳಿಕ ಆಯತಪ್ಪಿ ಬಿದ್ದಿದ್ದಾನೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.
ಇತ್ತೀಚೆಗೆ ಉಡುಪಿಯಲ್ಲಿ ಜಲಪಾತ ವೀಕ್ಷಣೆಗೆ ಬಂದ ಯುವಕನೊಬ್ಬ ಬಂಡೆ ಮೇಲೆ ನಿಂತು ರೀಲ್ಸ್ ಮಾಡುವಾಗ ಆಯತಪ್ಪಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಘಟನೆ ನಡೆದಿತ್ತು. ಕೊಲ್ಲೂರು ಬಳಿ ಅರಶಿನಗುಂಡಿ ಜಲಪಾತದಲ್ಲಿ ಭದ್ರಾವತಿ ಮೂಲದ ಶರತ್ ಕುಮಾರ್ (23) ಎಂಬ ಯುವಕ ನೀರಿಗೆ ಸಿಲುಕಿ ಕೊಚ್ಚಿ ಹೋಗಿದ್ದ. ಯುವಕ ನೀರಿನಲ್ಲಿ ಬೀಳುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿತ್ತು.
ಇದನ್ನೂ ಓದಿ:Watch: ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ನೀರಿನಲ್ಲಿ ಕೊಚ್ಚಿಹೋದ ಯುವಕ.. ದೃಶ್ಯ ಮೊಬೈಲ್ನಲ್ಲಿ ಸೆರೆ