Russia Ukraine War: ಪ್ರಧಾನಿ ಮೋದಿ ನೇತೃತ್ವದಲ್ಲಿ ಮತ್ತೊಮ್ಮೆ ಉನ್ನತ ಮಟ್ಟದ ಸಭೆ
ಎರಡು ದಿನಗಳ ಕಾಲ ಸ್ವಕ್ಷೇತ್ರ ವಾರಣಾಸಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ದೆಹಲಿಗೆ ವಾಪಸ್ ಆಗಿದ್ದಾರೆ. ಇದರ ಬೆನ್ನಲ್ಲೇ ಸಚಿವರು ಹಾಗೂ ಪ್ರಮುಖ ಅಧಿಕಾರಿಗಳೊಂದಿಗೆ ಉಕ್ರೇನ್ ವಿಚಾರವಾಗಿ ಉನ್ನತ ಮಟ್ಟದ ಸಭೆ ನಡೆಸಿದರು. ಉಕ್ರೇನ್ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಕರೆದುಕೊಂಡು ಬರುವ ಕಾರ್ಯ ನಡೆಯುತ್ತಿದ್ದು, ಇದೇ ವಿಚಾರವಾಗಿ ನಮೋ ಮತ್ತೊಮ್ಮೆ ಮಹತ್ವದ ಸಭೆಯಲ್ಲಿ ಭಾಗಿಯಾದರು. ಉಕ್ರೇನ್ನಿಂದ ಈವರೆಗೆ 13,300 ಭಾರತೀಯರನ್ನ ಕರೆತರಲಾಗಿದ್ದು, ಮುಂದಿನ 24 ಗಂಟೆಗಳಲ್ಲಿ 13 ವಿಮಾನಗಳಲ್ಲಿ 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಾಪಸ್ ಆಗಲಿದ್ದಾರೆಂದು ಕೇಂದ್ರ ಸರ್ಕಾರ ಈಗಾಗಲೇ ಮಾಹಿತಿ ಹಂಚಿಕೊಂಡಿದೆ.
Last Updated : Feb 3, 2023, 8:18 PM IST