ಅಪ್ಪು ಜನ್ಮದಿನ.. ಗಂಗಾವತಿಯಲ್ಲಿ ಅಭಿಮಾನಿಗಳಿಂದ 'ಜೇಮ್ಸ್' ಬೃಹತ್ ಮೆರವಣಿಗೆ - punith raj kumar james movie release tomorrow
ಗಂಗಾವತಿ:ಸ್ಯಾಂಡಲ್ವುಡ್ನ ಪ್ರತಿಭಾವಂತ ನಟ, ಸಾಮಾಜಿಕ ಸೇವೆಯಿಂದಲೇ ಜನರ ಮನಸ್ಸಿನಲ್ಲಿ ಸ್ಥಾನ ಗಳಿಸಿರುವ ದಿ. ಪುನೀತ್ ರಾಜ್ ಕುಮಾರ್ ಅವರ 47ನೇ ಹುಟ್ಟುಹಬ್ಬದ ಅಂಗವಾಗಿ ನಗರದಲ್ಲಿ ಅಭಿಮಾನಿಗಳಿಂದ ಬೃಹತ್ ಮೆರವಣಿಗೆ ನಡೆಯಿತು. ಈ ವೇಳೆ ಅಪ್ಪು ಅವರ ನೂರಾರು ಭಾವಚಿತ್ರಗಳು ರಾರಾಜಿಸುತ್ತಿದ್ದವು. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡು ಅಭಿಮಾನ ಮೆರೆದರು. ತೆರೆದ ವಾಹನದಲ್ಲಿ 'ಜೇಮ್ಸ್' ಭಾವಚಿತ್ರವನ್ನಿಟ್ಟು ಮೆರವಣಿಗೆ ಮಾಡಲಾಯಿತು. ನಗರದಲ್ಲಿ ಸುಮಾರು ನಾಲ್ಕು ಗಂಟೆಗೂ ಅಧಿಕ ಕಾಲ ಫ್ಯಾನ್ಸ್ ಬಿರುಬಿಸಿಲನ್ನು ಲೆಕ್ಕಿಸದೇ ಮೆರವಣಿಗೆಯಲ್ಲಿ ಭಾಗವಹಿಸಿದ್ದು, ಅಪ್ಪು ಮೇಲಿನ ಅಭಿಮಾನಕ್ಕೆ ಸಾಕ್ಷಿಯಾಗಿತ್ತು.
Last Updated : Feb 3, 2023, 8:20 PM IST