ಉಕ್ರೇನ್‌ನಿಂದ ಬೆಂಗಳೂರಿಗೆ ಮರಳಿದ ಕನ್ನಡಿಗರನ್ನು ಸ್ವಾಗತಿಸಿದ ಸಚಿವರು - ರಾಜ್ಯ ಕಂದಾಯ ಇಲಾಖೆ ಸಚಿವ ಆರ್ ಅಶೋಕ್
ಬೆಂಗಳೂರು: ಯುದ್ದಪೀಡಿತ ಉಕ್ರೇನ್‌ನಿಂದ ಈವರೆಗೆ ಕರ್ನಾಟಕದ 30 ವಿದ್ಯಾರ್ಥಿಗಳು ಭಾರತಕ್ಕೆ ಆಗಮಿಸಿದ್ದಾರೆ. ಈ ಪೈಕಿ 12 ವಿದ್ಯಾರ್ಥಿಗಳು ಇಂದು ಬೆಳಗ್ಗೆ 8.45 ಕ್ಕೆ ಮುಂಬೈಯಿಂದ ಬೆಂಗಳೂರಿಗೆ ಬಂದಿಳಿದರು. ಇವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಜ್ಯ ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ಸ್ವಾಗತಿಸಿದರು. ವಿದ್ಯಾರ್ಥಿಗಳ ಜೊತೆ ಕೆಲ ಕಾಲ ಸಂವಾದ ನಡೆಸಿದ ಸಚಿವರು ಕುಶಲೋಪರಿ ವಿಚಾರಿಸಿದರು. ವಿದ್ಯಾರ್ಥಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳಿದರು.
Last Updated : Feb 3, 2023, 8:17 PM IST