ನವೀನ್ ಸಾವಿನ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ - ಉನ್ನತ ಮಟ್ಟದ ಸಭೆ ನಡೆಸಿದ ಮೋದಿ
ಉಕ್ರೇನ್-ರಷ್ಯಾ ನಡುವಿನ ಬಿಕ್ಕಟ್ಟು ದಿನದಿಂದ ದಿನಕ್ಕೆ ಉಲ್ಭಣಗೊಳ್ಳುತ್ತಿದೆ. ರಷ್ಯಾ ಮಿಲಿಟರಿ ದಾಳಿಗೆ ಉಕ್ರೇನ್ ತತ್ತರಿಸಿದೆ. ಇದರ ಮಧ್ಯೆ ಭಾರತೀಯ ವಿದ್ಯಾರ್ಥಿಗಳು, ನಾಗರಿಕರು ಸಂಕಷ್ಟಕ್ಕೊಳಗಾಗಿದ್ದು, ಅವರನ್ನು ಕರೆತರಲು ಕೇಂದ್ರ ಸರ್ಕಾರ ಎಲ್ಲ ರೀತಿಯಲ್ಲೂ ಕೆಲಸ ಮಾಡ್ತಿದೆ. ಈ ನಡುವೆ ಇಂದು ಬೆಳಗ್ಗೆ ರಷ್ಯಾ ನಡೆಸಿರುವ ಶೆಲ್ ದಾಳಿಯಲ್ಲಿ ಕರ್ನಾಟಕದ ನವೀನ್ ಪ್ರಾಣ ಕಳೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದರು. ನಿನ್ನೆ ಕೂಡ ಮೇಲಿಂದ ಮೇಲೆ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ, ಕೇಂದ್ರದ ನಾಲ್ವರು ಸಚಿವರನ್ನು ಉಕ್ರೇನ್ ನೆರೆ ದೇಶಗಳಿಗೆ ಕಳುಹಿಸಿ, ಭಾರತೀಯರ ರಕ್ಷಣೆಯಲ್ಲಿ ಭಾಗಿಯಾಗುವಂತೆ ಸೂಚನೆ ನೀಡಿದ್ದರು.
Last Updated : Feb 3, 2023, 8:18 PM IST