Live Video: ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಯುವಕನ ರಕ್ಷಣೆ - ನದಿಗೆ ಹಾರಲು ಯತ್ನಿಸುತ್ತಿದ್ದವನ ತಡೆದ ಯುವಕರು
ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನನ್ನು ಸ್ಥಳೀಯ ಯುವಕರು ರಕ್ಷಿಸಿರುವ ಘಟನೆ ಮಹಾರಾಷ್ಟ್ರ ನಾಸಿಕ್ನ ಪಿಂಪಲ್ಗಾಂವ್ ಬಳಿ ನಡೆದಿದೆ. 27 ವರ್ಷದ ರಾಕೇಶ್ ಎಂಬಾತ ಕೌಟುಂಬಿಕ ಕಲಹದಿಂದಾಗಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ರಸ್ತೆಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಆತನನ್ನು ರಕ್ಷಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಿಂಪಲ್ಗಾಂವ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Last Updated : Feb 3, 2023, 8:20 PM IST