ಚಿರನಿದ್ರೆಗೆ ಜಾರಿದ 'ಅಪ್ಪು' ಕಂಡು ಬಿಕ್ಕಿ ಬಿಕ್ಕಿ ಅತ್ತ ನಟಿ ರಕ್ಷಿತಾ, ನಿರ್ದೇಶಕ ಪ್ರೇಮ್
ನಿನ್ನೆ ಹೃದಯಾಘಾತದಿಂದ ನಟ ಪುನೀತ್ ರಾಜ್ಕುಮಾರ್ ನಿಧನರಾಗಿದ್ದಾರೆ. ಕುಟುಂಬಸ್ಥರು, ಅಪಾರ ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ನಟ-ನಟಿಯರು ಸಹ ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ವೇಳೆ ಪುನೀತ್ ರಾಜ್ಕುಮಾರ್ಗೆ ಅಂತಿಮ ನಮನ ಸಲ್ಲಿಸಿದ ನಟಿ ರಕ್ಷಿತಾ ಮತ್ತು ನಿರ್ದೇಶಕ ಪ್ರೇಮ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ನಟಿ ರಕ್ಷಿತಾ ಪುನೀತ್ ಜತೆ ‘ಅಪ್ಪು’ ಸಿನಿಮಾದಲ್ಲಿ ನಟಿಸಿದ್ದರು.