ಕಲಿಯುಗ ಕರ್ಣನಿಗೆ ವರ್ಷದ ನಮನ - ಕಂಠೀರವ ಸ್ಟುಡಿಯೋದಲ್ಲಿ ಅಂಬಿಗೆ ನಮನ
ಇಂದು ಕಂಠೀರವ ಸ್ಟುಡಿಯೋದಲ್ಲಿ ನಡೆದ ಅಂಬರೀಶ್ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸ್ಯಾಂಡಲ್ವುಡ್ನ ಹಲವಾರು ಗಣ್ಯರು ಭಾಗಿಯಾಗಿದ್ದರು. ಸಮಾಧಿಯನ್ನು ಹೂಗಳಿಂದ ಅಲಂಕರಿಸಿ, ಅಂಬಿಗೆ ಇಷ್ಟವಾದ ತಿನಿಸುಗಳನ್ನು ಇಟ್ಟು ಪೂಜೆ ಸಲ್ಲಿಸಲಾಯಿತು. ಸ್ಯಾಂಡಲ್ವುಡ್ನ ದರ್ಶನ್, ರಾಕ್ಲೈನ್ ವೆಂಕಟೇಶ್, ದೊಡ್ಡಣ್ಣ ಪೂಜೆಯಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ನಡೆದವು.