ಬುಲೆಟ್ ಪ್ರಕಾಶ್ ಸ್ಥಿತಿ ಗಂಭೀರವಾಗಿದ್ದು ಚೇತರಿಕೆ ಲಕ್ಷಣ ಕಾಣುತ್ತಿದೆ: ದುನಿಯಾ ವಿಜಯ್ - bullet prakash in hospital
ಬುಲೆಟ್ ಪ್ರಕಾಶ್ ಆರೋಗ್ಯ ಗಂಭೀರವಾಗಿದೆ. ಆದ್ರೆ, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುವ ಲಕ್ಷಣ ಕಾಣುತ್ತಿದೆ ಎಂದು ನಟ ದುನಿಯಾ ವಿಜಯ್ ತಿಳಿಸಿದ್ದಾರೆ. ಕಳೆದ ಆರು ದಿನಗಳಿಂದ ಬುಲೆಟ್ ಪ್ರಕಾಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿನ್ನೆಲೆ ಇಂದು ಕನ್ನಿಂಗ್ ಹ್ಯಾಮ್ ರಸ್ತೆಯ ಪೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸದರು.