'ಪೊಗರು' ಸಿನಿಮಾ ನೋಡಲು ನರ್ತಕಿ ಚಿತ್ರಮಂದಿರದ ಮುಂದೆ ಅಭಿಮಾನಿಗಳ ದಂಡು - Fans gather on Nartaki theatre
ಧ್ರುವ ಸರ್ಜಾ ಅಭಿನಯದ 'ಪೊಗರು' ಸಿನಿಮಾ ಇಂದು ರಾಜ್ಯಾದ್ಯಂತ 1000 ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿದೆ. ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಪ್ಲೆಕ್ಸ್ ಸೇರಿ ಒಂದೇ ದಿನ 600 ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರುವ ನರ್ತಕಿ ಚಿತ್ರಮಂದಿರದಲ್ಲಿ 'ಪೊಗರು' ಸಿನಿಮಾ ತೆರೆ ಕಾಣುತ್ತಿದೆ. ಸಿನಿಮಾ ನೋಡಲು ಚಿತ್ರಮಂದಿರದ ಮುಂದೆ ಅಭಿಮಾನಿಗಳ ಸಂತೆಯೇ ನೆರೆದಿದೆ.