ಅಪ್ಪು ಅಮರ: ಪುಷ್ಪಾಲಂಕೃತ ಹಂಸತೋಲಿಕಾ ಪಲ್ಲಕ್ಕಿಯಲ್ಲಿ ಪಾರ್ಥಿವ ಶರೀರ ಪ್ರದಕ್ಷಿಣೆ - puneeths dead body carried by hamsatolika pallakki
ಬೆಂಗಳೂರು: ಕನ್ನಡ ಚಿತ್ರರಂಗದ ಯುವರತ್ನನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದ ಬಳಿಕ ಈಡಿಗ ಸಂಪ್ರದಾಯದಂತೆ ಕುಟುಂಬಸ್ಥರು, ಗಣ್ಯರ ಸಮ್ಮುಖದಲ್ಲಿ ನೆರವೇರಿಸಲಾಗಿದೆ. ಬೆಳ್ಳಂಬೆಳಗ್ಗೆ ಸುಮಾರು 5 ಗಂಟೆಗೆ ನಟ ಪುನೀತ್ ರಾಜ್‍ಕುಮಾರ್ ಪಾರ್ಥಿವ ಶರೀರ ಹೊತ್ತ ಅಲಂಕೃತ ವಾಹನ ಕಂಠೀರವ ಕ್ರೀಡಾಂಗಣದಿಂದ ನಗರದ ಪ್ರಮುಖ ರಸ್ತೆಗಳ ಮೂಲಕ ಹಾದು ಸ್ಟುಡಿಯೋ ತಲುಪಿತು. ನಂತರ ಕಂಠೀರವ ಸ್ಟುಡಿಯೋದಲ್ಲಿ ನಡೆದ ಅಂತಿಮ ಕಾರ್ಯದಲ್ಲಿ ಪುಷ್ಪಾಲಂಕೃತ ಹಂಸತೋಲಿಕಾ ಪಲ್ಲಕ್ಕಿಯಲ್ಲಿ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರವನ್ನು ಇರಿಸಿ ಮೂರು ಬಾರಿ ಪ್ರದಕ್ಷಿಣೆ ಮಾಡಿಸಿ, ಬಳಿಕ ಗುಂಡಿಯೊಳಗೆ ಶವವನ್ನು ಇಳಿಸಲಾಯಿತು. ವಿಧಿ ವಿಧಾನಗಳೊಂದಿಗೆ ರಾಜಕುಮಾರನನ್ನು ಮಣ್ಣು ಮಾಡಲಾಯಿತು.