'ಮುತ್ತುರಾಜ ಹೆತ್ತ ಮುತ್ತೇ ಎತ್ತ ಹೋದೆಯೋ..' ಹಾಡಿನ ಮೂಲಕ ಪುನೀತ್ಗೆ 'ಗೀತ ನಮನ' - ಹಾಡಿನ ಮೂಲಕ ಪುನೀತ್ಗೆ ಗೀತ ನಮನ
ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ 'ಪುನೀತ್ ನಮನ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮೊಂಬತ್ತಿ ಬೆಳಗಿಸುವ ಮೂಲಕ ಅಗಲಿದ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. Candle ಬೆಳಗಿಸುವ ಮೂಲಕ ಪುನೀತ್ ರಾಜ್ಕುಮಾರ್ ಅವರಿಗೆ 'ದೀಪ ನಮನ' ಸಲ್ಲಿಸಲಾಯಿತು. ಇದೇ ಸಮಯದಲ್ಲಿ ಗೀತೆಯೊಂದರ ಮೂಲಕ 'ಗೀತ ನಮನ' ಸಲ್ಲಿಸಲಾಯಿತು. ಪುನೀತ್ ರಾಜ್ಕುಮಾರ್ ಅಗಲಿಕೆಯ ನೋವಿನಲ್ಲಿ 'ಮುತ್ತುರಾಜ ಹೆತ್ತ ಮುತ್ತೇ ಎತ್ತ ಹೋದೆಯೋ' ಎಂಬ ಹಾಡನ್ನು ಸಾಹಿತಿ ನಾಗೇಂದ್ರ ಪ್ರಸಾದ್ ರಚಿಸಿ, ಸಂಯೋಜಿಸಿದ್ದಾರೆ. ಇದಕ್ಕೆ ಗಾಯಕ ವಿಜಯ್ ಪ್ರಕಾಶ್ ಈ ಹಾಡನ್ನು ಹಾಡಿದ್ದಾರೆ.