ಕೊರೊನಾ ತಡೆಗೆ ದೇಶವೇ ಲಾಕ್‌ಡೌನ್.. ಮನೆಯಲ್ಲಿ ದೇಹ ದಂಡಿಸುತ್ತಿರೋ ಮರಿ ಟೈಗರ್!! - vinod prabhakar workout
ಕೊರೊನಾ ಭೀತಿ ಹಿನ್ನೆಲೆ ಇಡೀ ದೇಶವೇ ಸಂಪೂರ್ಣ ಲಾಕ್‌ಡೌನ್ ಆಗಿದೆ. ಹೀಗಾಗಿ ಕೆಲ ಸಿನಿಮಾ ತಾರೆಯರು ಮನೆಯಲ್ಲೇ ಫ್ಯಾಮಿಲಿ ಜೊತೆ ಟೈಂ ಕಳೆಯುತ್ತಿದ್ದಾರೆ. ಈಗ ಸ್ಯಾಂಡಲ್‌ವುಡ್‌ನ ಮರಿ ಟೈಗರ್ ವಿನೋದ್ ಪ್ರಭಾಕರ್ ಪ್ರತಿ ದಿನ ಬೆಳಗ್ಗೆ ಮನೆಯಲ್ಲಿಯೇ ವರ್ಕೌಟ್ ಮಾಡುತ್ತಿದ್ದಾರೆ. ಎಲ್ಲರೂ ಮನೆಯಲ್ಲಿಯೇ ಇದ್ದು ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ ಅಂತಾ ತಮ್ಮ ಅಭಿಮಾನಿಗಳಿಗೆ ಕರೆ ಕೊಟ್ಟಿದ್ದಾರೆ. ಕೊರೊನಾ ವೈರಸ್ ತಡೆಗೆ ಮುನ್ನೆಚ್ಚರಿಕೆ ವಹಿಸುವಂತೆಯೂ ಮನವಿ ಮಾಡಿದ್ದಾರೆ.