ಧೋನಿ ಉತ್ತಮ ಬ್ಯಾಟ್ಸ್ಮನ್ ಮಾತ್ರವಲ್ಲ, ಯಶಸ್ವಿ ನಾಯಕ: ಅನುರಾಗ್ ಠಾಕೂರ್!
ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಅನೇಕರು ಅವರ ಸಾಧನೆ ಹಾಡಿ ಹೊಗಳುತ್ತಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಅನುರಾಗ್ ಠಾಕೂರ್ ಕೂಡ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ. ಧೋನಿ ಓರ್ವ ಉತ್ತಮ ಬ್ಯಾಟ್ಸ್ಮನ್ ಮಾತ್ರವಲ್ಲ. ಬದಲಿಗೆ ಯಶಸ್ವಿ ನಾಯಕ ಕೂಡ. ಭಾರತೀಯ ಕ್ರಿಕೆಟ್ಗೆ ಸಾಕಷ್ಟು ಕೊಡುಗೆ ನೀಡಿದ್ದು, ಅವರ ಆಟವನ್ನ ಅಭಿಮಾನಿಗಳು ಮಿಸ್ ಮಾಡಿಕೊಳ್ಳಲಿದ್ದಾರೆ. ಆದರೆ ಯುವ ಅಟಗಾರರಿಗೆ ಅವಕಾಶ ನೀಡಲು ಧೋನಿ ತೆಗೆದುಕೊಂಡಿರುವ ನಿರ್ಧಾರ ಉತ್ತಮ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.
Last Updated : Aug 16, 2020, 6:20 AM IST