ಟೀಂ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಆಡಲಿದೆ: ಗಂಗೂಲಿ ವಿಶ್ವಾಸ - ಟೀಂ ಇಂಡಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್
ಕೋಲ್ಕತ್ತಾ: ಸರಸ್ವತಿ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಭಾರತೀಯ ಕ್ರಿಕೆಟ್ ಸಮಿತಿ ಅಧ್ಯಕ್ಷ ಸೌರವ್ ಗಂಗೂಲಿ ತಾವು ಸಂಪೂರ್ಣವಾಗಿ ಫಿಟ್ ಆಗಿರುವುದಾಗಿ ಹೇಳಿಕೊಂಡಿದ್ದಾರೆ. ಇದೇ ವೇಳೆ, ಟೀಂ ಇಂಡಿಯಾ ಖಂಡಿತವಾಗಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಲಘು ಹೃದಯಾಘಾತಕ್ಕೊಳಗಾಗಿದ್ದ ಸೌರವ್ ಗಂಗೂಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.