ಕಾರವಾರದಲ್ಲಿ 10ನೇ ರಾಷ್ಟ್ರೀಯ ಮತದಾರರ ದಿನಾಚರಣೆ.. - ಕಾರವಾರ ಸುದ್ದಿ
ಕಾರವಾರ: 10ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನ ಕಾರವಾರದಲ್ಲಿ ಇಂದು ಆಚರಿಸಲಾಯಿತು. ನಗರದ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನ ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಗೋವಿಂದಯ್ಯ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಿದ್ದು, ಎಲ್ಲರೂ ಕಡ್ಡಾಯ ಮತದಾನ ಮಾಡುವಂತೆ ಪ್ರಮಾಣ ವಚನ ಸ್ವೀಕರಿಸಲಾಯಿತು. ಇದೇ ವೇಳೆ ಯುವ ಮತದಾರರಿಗೆ ನೂತನವಾಗಿ ಬಿಡುಗಡೆಯಾಗಿರುವ ಮತದಾರರ ಸ್ಮಾರ್ಟ್ ಗುರುತಿನ ಚೀಟಿಗಳನ್ನು ವಿತರಿಸಲಾಯಿತು.