ಆರ್ಆರ್ ನಗರ ಉಪಚುನಾವಣೆ ಮತ ಎಣಿಕೆ: ಇಂದು ರಾತ್ರಿಯವರೆಗೆ ನಿಷೇಧಾಜ್ಞೆ ಜಾರಿ - ಬೆಂಗಳೂರು
ಆರ್ಆರ್ ನಗರ ಉಪಚುನಾವಣೆ ಮತ ಎಣಿಕೆ ಹಿನ್ನೆಲೆ ಇಂದು ರಾತ್ರಿಯವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ. ಮತ ಎಣಿಕೆ ಕೇಂದ್ರ ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆ ಮುಂಭಾಗದಲ್ಲಿ ಸಂಭ್ರಮಾಚರಣೆ ನಿಷೇಧಿಸಲಾಗಿದೆ. ಯಾವುದೇ ಪಕ್ಷದ ಕಾರ್ಯಕರ್ತೆಯರು ಪಟಾಕಿ ಹೊಡೆದು ಸಂಭ್ರಮಾಚರಣೆ ಮಾಡುವುದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡಿಲ್ಲ. ಮತ ಎಣಿಕೆ ಸುತ್ತ ಮುತ್ತ ಪೊಲೀಸ್ ಸರ್ಪಗಾವಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಷೇಧಾಜ್ಣೆ ಮುಂದುವರೆದಿದೆ.