ಮನೆಯಲ್ಲಿ ಅಡಗಿ ಕುಳಿತಿದ್ದ 15 ಅಡಿ ಉದ್ದದ ಬೃಹತ್ ಕಾಳಿಂಗಸರ್ಪ! - 15 ಅಡಿ ಕಾಳಿಂಗ ಸರ್ಪ ಪತ್ತೆ ಲೇಟೆಸ್ಟ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಕಾಫಿ ತೋಟದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕನ ಮನೆಗೆ ಬಂದಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಗ್ರಾಮದ ಕೃಷ್ಣಭಟ್ ಎಂಬುವರ ಕಾಫಿ ತೋಟದಲ್ಲಿ ಕಾರ್ಮಿಕರಿಗಾಗಿ ನಿರ್ಮಾಣ ಮಾಡಿರುವ ಮನೆಯಲ್ಲಿ ಬರೋಬ್ಬರಿ 15 ಅಡಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಅಡಗಿ ಮಲಗಿತ್ತು. ಕೆಲಸ ಮುಗಿಸಿಕೊಂಡು ಮನೆಗೆ ಬಂದ ಕಾರ್ಮಿಕರು ಮನೆಯಲ್ಲಿದ್ದ ಕಾಳಿಂಗ ಸರ್ಪ ನೋಡಿ ಬೆಚ್ಚಿ ಬಿದ್ದಿದ್ದಾರೆ. ಚೀರಾಡಿಕೊಂಡು ಮನೆಯಿಂದ ಹೊರ ಓಡಿ ಹೋಗಿ, ಕೂಡಲೇ ತೋಟದ ಮಾಲೀಕರಿಗೆ ವಿಚಾರ ತಿಳಿಸಿದ್ದಾರೆ. ತೋಟದ ಮಾಲೀಕರು ಮೂಡಿಗೆರೆಯ ಉರಗ ತಜ್ಞ ಆರೀಫ್ಗೆ ಸ್ಥಳಕ್ಕೆ ಕರೆಸಿದ್ದಾರೆ. ನಂತರ ಆರೀಫ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಈ ಬೃಹತ್ ಗಾತ್ರದ ಕಾಳಿಂಗ ಸರ್ಪ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸೆರೆ ಹಿಡಿದ ಕಾಳಿಂಗ ಸರ್ಪವನ್ನು ಮೂಡಿಗೆರೆ ಅರಣ್ಯ ಇಲಾಖೆಯ ಸಿಬ್ಬಂದಿಯ ಸಮ್ಮುಖದಲ್ಲಿ ಆರೀಫ್ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.
Last Updated : Dec 6, 2020, 2:10 PM IST