ತುಮಕೂರು ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ: 183ಕ್ಕೇರಿದ ಸೋಂಕಿತರ ಸಂಖ್ಯೆ - ತುಮಕೂರು ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಸುದ್ದಿ
ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಒಂದೇ ದಿನ 44 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 183ಕ್ಕೆ ಏರಿಕೆಯಾಗಿದೆ. 127 ಮಂದಿಗೆ ಜಿಲ್ಲೆ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 49 ಮಂದಿ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 19,220 ಮಂದಿ ಎಲ್ಲಿ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 15,726 ಮಂದಿಯಲ್ಲಿ ನೆಗೆಟಿವ್ ಕಂಡು ಬಂದಿದೆ. ಒಂದೇ ದಿನ ಕೊರಟಗೆರೆ ತಾಲೂಕಿನಲ್ಲಿ 17 ಮಂದಿಯಲ್ಲಿ, ಗುಬ್ಬಿ ತಾಲೂಕಿನ 13 ಮಂದಿಯಲ್ಲಿ ಸೋಂಕು ಕಂಡುಬಂದಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಒಂದೇ ಕುಟುಂಬದಲ್ಲಿ ನಾಲ್ವರಿಗೆ ಸೋಂಕು ಸಾಕಷ್ಟು ಗಾಬರಿ ಹುಟ್ಟಿಸಿದೆ. ಅಲ್ಲದೇ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇರುವುದರಿಂದ ಆತಂಕಕ್ಕೆ ಕಾರಣವಾಗಿದೆ.