ಮಂಡ್ಯ 18ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಚಾಲನೆ - 18th Kannada Literary Conference in Mandya
ಮಂಡ್ಯ: ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 18ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಶೈಲಜಾ ಚಾಲನೆ ನೀಡಿದರು. ಮೆರವಣಿಗೆ ಮುಖಾಂತರ ಸಮ್ಮೇಳನಾಧ್ಯಕ್ಷೆ ಮೀರಾ ಶಿವಲಿಂಗಯ್ಯರನ್ನು ವೇದಿಕೆಗೆ ಕರೆತಂದರು. ಮೆರವಣಿಗೆಯು ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿತು. ಈ ವೇಳೆ 1001 ಪೂರ್ಣಕುಂಭಗಳೊಂದಿಗೆ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು.