ಕೊರೊನಾ ವಿರುದ್ಧ ಹೋರಾಟಕ್ಕೆ 25 ಲಕ್ಷ ದೇಣಿಗೆ ನೀಡಿದ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ - ಬೆಳಗಾವಿ ಲೇಟೆಸ್ಟ್ ನ್ಯೂಸ್
ಬೆಳಗಾವಿ: ಕೊರೊನಾ ವಿರುದ್ಧ ಹೋರಾಟಕ್ಕೆ ನೆರವಾಗಲು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂ ದೇಣಿಗೆ ನೀಡಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೂಳಪ್ಪ ಹೊಸಮನಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಮೂಲಕ ಸಿಎಂಗೆ ಪರಿಹಾರ ನಿಧಿ ನೀಡಿದರು. ಮಹಾಮಾರಿ ವಿರುದ್ಧ ಹೋರಾಡಲು ಆರಂಭಿಕ ಹಂತವಾಗಿ ಬುಡಾ 25 ಲಕ್ಷ ಪರಿಹಾರ ನೀಡಿದ್ದು, ಇದರ ಅಧ್ಯಕ್ಷ ಗೂಳಪ್ಪ ಹೊಸಮನಿತಮ್ಮ ಒಂದು ತಿಂಗಳ ಗೌರವಧನವನ್ನು ಜಿಲ್ಲಾಧಿಕಾರಿಗೆ ನೀಡಿದ್ದಾರೆ. ಈ ವೇಳೆ ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ, ಶಾಸಕ ಅನಿಲ್ ಬೆನಕೆ ಮತ್ತಿತರರು ಉಪಸ್ಥಿತರಿದ್ದರು.